ತುರುವೇಕೆರೆ: ಬೆಂಬಲ ಬೆಲೆಯಡಿ ರಾಗಿ ಮಾರಾಟ ಮಾಡಲು ತಾಲ್ಲೂಕಿನ ಎಂಟು ಸಾವಿರಕ್ಕೂ ಹೆಚ್ಚು ರೈತರು ಈಗಾಗಲೇ ರಾಗಿ ಖರೀದಿ ಕೇಂದ್ರದಲ್ಲಿ ಹೆಸರು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ರಾಗಿ ಖರೀದಿ ಕೇಂದ್ರದ ವ್ಯವಸ್ಥಾಪಕಿ ಚೇತನ ತಿಳಿಸಿದ್ದಾರೆ.
ಡಿಸೆಂಬರ್ 15ರಂದು ರಾಗಿ ನೋಂದಣಿಗೆ ಕೊನೆ ದಿನ. ಪಟ್ಟಣದ ಎಪಿಎಂಸಿ ಆವರಣದಲ್ಲಿ ಅಕ್ಟೋಬರ್ 23ರಿಂದ ಖರೀದಿ ಕೇಂದ್ರದಲ್ಲಿ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದೆ. ಈಗಾಗಲೇ ಎಂಟು ಸಾವಿರಕ್ಕೂ ಹೆಚ್ಚು ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ. ಒಟ್ಟು 1.93 ಲಕ್ಷ ಕ್ವಿಂಟಾಲ್ ರಾಗಿ ಮಾರಾಟ ಮಾಡಲು ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದಿದ್ದಾರೆ.
ಪ್ರತಿ ಕ್ವಿಂಟಲ್ ರಾಗಿಗೆ ರೂ.4,886 ರೈತರಿಗೆ ದೊರೆಯಲಿದೆ. ಜನವರಿ ಮೊದಲ ವಾರ ಅಥವಾ ಎರಡನೇ ವಾರದಿಂದ ರಾಗಿ ಖರೀದಿ ಮಾಡುವ ಸಾಧ್ಯತೆ ಇದೆ ಎನ್ನುತ್ತಾರೆ ಖರೀದಿ ಕೇಂದ್ರದ ಅಧಿಕಾರಿಗಳು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


