ಬೆಂಗಳೂರು: ಕನ್ನಡ ಚಲನಚಿತ್ರೋದ್ಯಮಕ್ಕೆ ಉದ್ಯಮ ಸ್ಥಾನಮಾನ ನೀಡಬೇಕೆಂಬ ಬಹುದಿನಗಳ ಬೇಡಿಕೆ ಈಡೇರಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಸಿನಿಮಾ ಕ್ಷೇತ್ರಕ್ಕೆ ಉದ್ಯಮ ಸ್ಥಾನಮಾನ ನೀಡಲಾಗುವುದು ಮತ್ತು ಕೈಗಾರಿಕಾ ನೀತಿಯಡಿಯಲ್ಲಿ ಒದಗಿಸಲಾದ ಸೌಲಭ್ಯಗಳನ್ನು ಚಲನಚಿತ್ರೋದ್ಯಮಕ್ಕೂ ವಿಸ್ತರಿಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ.
ಕರ್ನಾಟಕದ ಸಿನಿಮಾ ಪ್ರೇಮಿಗಳ ಬಹುವರ್ಷದ ಬೇಡಿಕೆ ಆಗಿದ್ದ ಮಲ್ಟಿಪ್ಲೆಕ್ಸ್ ಟಿಕೆಟ್ ದರ ನಿಯಂತ್ರಣ ಮಾಡುವ ಬೇಡಿಕೆಗೆ ಸರ್ಕಾರ ಒಪ್ಪಿದ್ದು, ಬಜೆಟ್ ನಲ್ಲಿ ಮಲ್ಟಿಪ್ಲೆಕ್ಸ್ ಟಿಕೆಟ್ ದರಗಳನ್ನು 200 ರೂಪಾಯಿಗೆ ಸಿಎಂ ನಿಗದಿಪಡಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4