ವರದಿ: ಹಾದನೂರು ಚಂದ್ರ
ಸರಗೂರು: ಕೊಂಬಿಂಗ್ ಕಾರ್ಯಾಚರಣೆ ನಡೆಯುವ ವೇಳೆ ಗಾಬರಿಗೊಂಡ ಹುಲಿ ಕಾಡಿನತ್ತ ಓಡುವಾಗ ಜಮೀನಿನಲ್ಲಿ ಹತ್ತಿ ಬಿಡಿಸುತ್ತಿದ್ದ ವ್ಯಕ್ತಿಯ ಮೇಲೆ ದಾಳಿ ನಡೆಸಿ ಆತನನ್ನು ಗಂಭೀರವಾಗಿ ಗಾಯಗೊಳಿಸಿರುವ ಘಟನೆ ತಾಲೂಕಿನ ಬಡಗಲುಪುರ ಸಮೀಪ ನಡೆದಿದೆ.
ತಾಲೂಕಿನ ಬಡಗಲುಪುರ ಸಮೀಪದ ಹಾದನೂರು ಗ್ರಾಮದ ಮಹದೇವಗೌಡ ಹುಲಿ ದಾಳಿಗೆ ತುತ್ತಾದವರು. ಮಹದೇವ ಎಂದಿನಂತೆ ತಮ್ಮ ಜಮೀನಿನಲ್ಲಿ ಹತ್ತಿ ಬಿಡಿಸಲು ತೆರಳಿದ್ದಾರೆ. ಈ ವೇಳೆ ಅರಣ್ಯ ಇಲಾಖೆಯು ಹುಲಿ ಸೆರೆಗೆ ಅಭಿಮನ್ಯು ಮತ್ತು ಭಗೀರಥ ಎಂಬ ಸಾಕಾನೆಗಳ ಮೂಲಕ ಕೊಂಬಿಂಗ್ ಕಾರ್ಯಾಚರಣೆ ಆರಂಭಿಸಿದ್ದು, ಮಧ್ಯಾಹ್ನ ಸುಮಾರು 3 ಗಂಟೆಯ ಸಮಯದಲ್ಲಿ ಕಾಣಿಸಿಕೊಂಡ ಹುಲಿ, ಸಾಕಾನೆಗಳ ಕಂಡು ಕಾಡಿನತ್ತ ಓಡುವ ವೇಳೆ ಜಮೀನಿನಲ್ಲಿ ಹತ್ತಿ ಬಿಡಿಸುತ್ತಿದ್ದ ಮಹದೇವನನ್ನು ಕಂಡು ಗಾಬರಿಯಿಂದ ಆತನ ಮೇಲೆ ದಾಳಿ ನಡೆಸಿದೆ. ಈ ವೇಳೆ ಮಹದೇವ ಗೌಡ ಎಂಬವರ ಮುಖದ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ಕಣ್ಣು ಕಿತ್ತು ಬಂದಿದೆ. ಕೈ ಮೂಳು ಮುರಿದೆ .
ಬಡಗಲುಪುರ ಹಾಗೂ ಹಾದನೂರು ಸುತ್ತಮುತ್ತಲಿನ ಜಮೀನು ಹಾಗೂ ಗ್ರಾಮಗಳಲ್ಲಿ ಕಳೆದ ಒಂದು ವಾರದಿಂದ ಹುಲಿ ಕಾಣಿಸಿಕೊಳ್ಳುತ್ತಿದ್ದು, ಹುಲಿಯನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಒತ್ತಾಯಿಸಿದ್ದರು. ಹೀಗಾಗಿ ಅರಣ್ಯ ಇಲಾಖೆ ಹುಲಿ ಸೆರೆಗೆ ಕಾರ್ಯಾಚರಣೆ ಆರಂಭಿಸಿತ್ತು. ಆದರೆ, ಗುರುವಾರ ಸಾಕಾನೆಗಳ ಸಹಾಯದಿಂದ ಕಾರ್ಯಾಚರಣೆ ಆರಂಭಿಸಿದ ಅರಣ್ಯ ಇಲಾಖೆ ಹುಲಿಗೆ ಅರವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿಯಲು ಮುಂದಾಗಿದೆ. ಈ ವೇಳೆ ಆನೆಗಳನ್ನು ಕಂಡು ಗಾಬರಿಯಿಂದ ಕಾಡನತ್ತ ಓಡುವ ವೇಳೆ ಹುಲಿ ಮಹದೇವ ಗೌಡ ಅವರ ಮೇಲೆ ದಾಳಿ ಮಾಡಿದೆ ಎನ್ನಲಾಗಿದೆ.
ಇನ್ನು ಸಾಕಾನೆಗಳ ಮೂಲಕ ಕೊಂಬಿಂಗ್ ಆರಂಭಿಸಿರುವ ಬಗ್ಗೆ ಅರಣ್ಯ ಇಲಾಖೆಯು ಗ್ರಾಮಸ್ಥರಿಗೆ ಸರಿಯಾಗಿ ಮಾಹಿತಿ ನೀಡಿಲ್ಲ ಎಂಬ ಆರೋಪವೂ ಕೇಳಿಬಂದಿದ್ದು, ಕೊಂಬಿಂಗ್ ಬಗ್ಗೆ ಅರಿವಿಲ್ಲದೇ ಹಲವು ರೈತರು ಜಮೀನಿಗಳಿಗೆ ಕೆಲಸಕ್ಕೆಂದು ತೆರಳಿದ್ದರು ಎನ್ನಲಾಗಿದೆ. ಹೀಗಾಗಿಯೇ ಇದರ ಮಾಹಿತಿ ಇಲ್ಲದೆ ಮಹದೇವ ಗೌಡ ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಅರಣ್ಯ ಇಲಾಖೆಯ ವಾಹನ ಜಖಂ:
ಹುಲಿ ಕಾಣಿಸಿಕೊಳ್ಳುತ್ತಿರುವ ಬಗ್ಗೆ ಮಾಹಿತಿ ನೀಡಿದ್ದರೂ ಸರಿಯಾದ ರೀತಿಯಲ್ಲಿ ಕಾರ್ಯಾಚರಣೆ ಮಾಡಿಲ್ಲ. ಹಾಗೂ ಕಾರ್ಯಾಚರಣೆ ಮಾಡುತ್ತಿರುವ ಬಗ್ಗೆ ಜನರಿಗೆ ಎಚ್ಚರಿಕೆ ಸಂದೇಶ ನೀಡಿಲ್ಲ ಎಂದು ಆರೋಪಿಸಿದ ಗ್ರಾಮಸ್ಥರು ಹುಲಿ ದಾಳಿಯಾದ ಬಳಿಕ ಅರಣ್ಯ ಇಲಾಖೆಯ ಸಿಬ್ಬಂದಿ ವಿರುದ್ಧ ಆಕ್ರೋಶ ಹೊರಹಾಕಿದರು. ಸಿಬ್ಬಂದಿಯನ್ನು ಜಮೀನು ಬಿಟ್ಟು ಹೋಗದಂತೆ ತಡೆದು, ಅರಣ್ಯ ಇಲಾಖೆಯ ವಾಹನಗಳನ್ನು ಜಖಂ ಮಾಡಿದರು. ಹೀಗಾಗಿ ಕೆಲ ಕಾಲ ಅರಣ್ಯ ಇಲಾಖೆ ಹಾಗೂ ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆಯಿತು.
ಹುಲಿಯನ್ನು ಹಿಡಿಯುವ ತನಕ ನಿಮ್ಮನ್ನು ಬಿಡುವುದಿಲ್ಲ ಎಂದು ಪಟ್ಟು ಹಿಡಿದು ಅಕ್ಕಪಕ್ಕದ ಗ್ರಾಮಸ್ಥರು ಹಾಗೂ ಮುಖಂಡರು ತಡೆ ನೀಡಿ. ಅರಣ್ಯ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ಮಾಡಿದ್ದೀರಾ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಬಡಗಲುಪುರ ಭಾಗದಲ್ಲಿ ಆಗಾಗ್ಗೆ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ಗುರುವಾರ ಬಡಗಲು ಪುರದ ಮಹದೇವು ಎಂಬವರ ಮೇಲೆ ಹುಲಿ ದಾಳಿ ನಡೆಸಿದೆ. ಇದರಿಂದಾಗಿ ಆತನ ಎರಡೂ ಕಣ್ಣುಗಳನ್ನು ಕಳೆದುಕೊಂಡು ಸಾವು–ಬದುಕಿನ ನಡುವೆ ಹೋರಾಟದಲ್ಲಿರುವ ಆತನಿಗೆ ಸೂಕ್ತ ಚಿಕಿತ್ಸೆ ನೀಡಬೇಕು. ಜತೆಗೆ ಸರ್ಕಾರ ವತಿಯಿಂದ ಸೂಕ್ತ ಪರಿಹಾರ ನೀಡಬೇಕು. ಈ ಭಾಗದಲ್ಲಿ ಹುಲಿ ಹಾಗೂ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಸರ್ಕಾರ ಈ ಬಗ್ಗೆ ತುರ್ತಾಗಿ ಕ್ರಮವಹಿಸಬೇಕು. ಹೆಡಿಯಾಲ ವಲಯದ ಅರಣ್ಯ ಮುಂದೆ ಮುತ್ತಿಗೆ ಹಾಕುತ್ತವೆ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
— ಬಡಗಲುಪುರ ನಾಗೇಂದ್ರ, ರಾಜ್ಯಾಧ್ಯಕ್ಷ, ರಾಜ್ಯ ರೈತ ಸಂಘ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC