ತುಮಕೂರು: ಹುಲಿ ಉಗುರಿನ ಪೆಂಡೆಂಟ್ ಧರಿಸಿದ ದೂರಿನ ಹಿನ್ನಲೆಯಲ್ಲಿ ಸ್ವಯಂ ಘೋಷಿತ ಬಿದನಗೆರೆಯ ಶನಿಮಹಾತ್ಮ ದೇವಾಲಯದ ಧನಂಜಯ ಗುರೂಜಿ ಅವರನ್ನು ಇಂದು ಅರಣ್ಯ ಇಲಾಖೆ ಅಧಿಕಾರಿಗಳು ವಿಚಾರಣೆಗೊಳಪಡಿಸಿದಾಗ ಹುಲಿ ಹೋಗಲು ಪತ್ತೆಯಾಗಿಲ್ಲ.
ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಬಿದನಗೆರೆಯಲ್ಲಿ ಶನಿಮಹಾತ್ಮ ದೇವಾಲಯದಲ್ಲಿ ಧನಂಜಯ್ ಗುರೂಜಿ ಅಧ್ಯಕ್ಷರಾಗಿದ್ದಾರೆ.
ದೇವಾಲಯದ ಬಳಿ ಬಸವೇಶ್ವರ ಮಠ ಸ್ಥಾಪಿಸಿ ಗೂರುಜಿಯಾಗಿದ್ದು, ಬಳಿಕ ಮೈ ತುಂಬಾ ಬಂಗಾರದ ಓಡವೆ ಧರಿಸಿ ಕಾಣಿಸಿಕೊಂಡಿದ್ದಾರೆ. ಒಡವೆಗಳ ಜೊತೆ ಹುಲಿ ಉಗುರಿನ ಪೆಂಡೆಂಟ್ ಅನ್ನು ಧರಿಸಿ ಸಾಕಷ್ಟು ಸುದ್ದಿಯಾಗಿದ್ದರು.
ಈ ರೀತಿ ಹುಲಿ ಉಗುರು ಧರಿಸಿರುವ ಕುರಿತು ಸಾಮಾಜಿಕ ಕಾರ್ಯಕರ್ತ ನಾಗರಾಜ್ ರಿಂದ ಅರಣ್ಯ ಇಲಾಖೆಗೆ ದೂರು ನೀಡಿದ್ದರು. ಇಂದು ಅರಣ್ಯ ಇಲಾಖೆ ಅಧಿಕಾರಿಗಳಿಂದ ಧನಂಜಯ್ಯ ಗುರುಜಿ ವಿಚಾರಣೆ ನಡೆಸಲಾಗಿದೆ.
ಧನಂಜಯ್ಯ ಗುರೂಜಿಯ ದೇವಸ್ಥಾನಕ್ಕೆ ಭೇಟಿ ಕೊಟ್ಟು ವಿಚಾರಣೆ ಮಾಡಿದ್ದಾರೆ. ಕುಣಿಗಲ್ ವಲಯ ಅರಣ್ಯಾಧಿಕಾರಿಗಳಿಂದ ನಡೆದ ವಿಚಾರಣೆ ವೇಳೆ ಹುಲಿ ಉಗುರು ಧರಿಸಿಲ್ಲ ಎಂಬ ಮಾಹಿತಿಯನ್ನು ಧನಂಜಯ್ಯ ನೀಡಿದ್ದಾರೆ.