ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಕಾಲ ಸನ್ನಿಹಿತವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನಿಸಿದರೆ, ಸರ್ಕಾರ ಯಾವುದೇ ಸಂದರ್ಭದಲ್ಲೂ ಬೀಳಬಹುದು. ಸಿದ್ದರಾಮಯ್ಯನವರು ಈಗಲಾದರೂ ಬಂಡತನ ಬಿಟ್ಟು ತಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಅದೇನೋ ಕಟ್ಟಡದ ನಕ್ಷೆಯನ್ನು ಹಿಡಿದುಕೊಂಡು ಅವರಿಗೆ ವಿವರಣೆ ನೀಡುತ್ತಿದ್ದರು. ಮತ್ತೊಂದು ಕಡೆ ಅನೇಕರು ರಹಸ್ಯ ಸಭೆಗಳನ್ನು ನಡೆಸುತ್ತಿದ್ದಾರೆ. ಇವೆಲ್ಲವನ್ನೂ ಗಮನಿಸಿದರೆ ಸರ್ಕಾರ ಹೇಗೆ ಉಳಿಯುತ್ತದೆ ಎಂದು ಪ್ರಶ್ನಿಸಿದರು.
ಇದೇ ವೇಳೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ ಮಾಡಿರುವುದಕ್ಕೆ ಸ್ಪಷ್ಟನೆ ನೀಡಿದ ಅವರು, ನಮ ಮತಕ್ಷೇತ್ರವಾದ ಶಿಕಾರಿಪುರದಲ್ಲಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುತ್ತದೆ. ಇಲ್ಲಿ ಟೋಲ್ ಇರುವುದರಿಂದ ರೈತರಿಗೆ ಬಡವರು, ಜನಸಾಮಾನ್ಯರಿಗೆ ತೊಂದರೆಯಾಗುತ್ತದೆ. ಈ ಸಮಸ್ಯೆಯನ್ನು ಸರಿಪಡಿಸಬೇಕೆಂದು ಮನವಿ ಮಾಡಲಾಗಿದೆ. ನಮ ಮನವಿಗೆ ಸ್ಪಂದಿಸಿರುವ ಸಚಿವರು ಶೀಘ್ರದಲ್ಲೇ ಸಭೆ ಕರೆದು ಇತ್ಯರ್ಥಪಡಿಸುವ ಭರವಸೆ ನೀಡಿದ್ದಾರೆ ಎಂದು ವಿಜಯೇಂದ್ರ ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296