ತಿಪಟೂರು: ನಗರದ ಎಪಿಎಂಸಿ ಮಾರುಕಟ್ಟೆಯ ಕೊಬ್ಬರಿ ಯಾರ್ಡ್ ನಲ್ಲಿರುವ ಟಿಎಪಿಸಿ ಎಂ ಎಸ್ ಲಿಮಿಟೆಡ್ ನ ಕಚೇರಿಯ ಬಾಗಿಲು ಮುರಿದು, ಸುಮಾರು 53 ಸಾವಿರ ನಗದು ದೋಚಿ ಘಟನೆ ನಡೆದಿದೆ.
ಕಳ್ಳರು ಕೃತ್ಯದ ವೇಳೆ ದಾಖಲಾತಿಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದು, ಘಟನೆ ಬಗ್ಗೆ ಹಲವು ಅನುಮಾನಗಳಿಗೆ ಕಾರಣವಾಗಿದೆ.
ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಅಧ್ಯಕ್ಷ ಶಂಕರ ಮೂರ್ತಿ (ಮಡೇನೂರು) , ರಾತ್ರಿ ನಗರದ ನಮ್ಮ ಕಛೇರಿಯಲ್ಲಿ ನಡೆದಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ನಗರ ಮತ್ತು ತಾಲೂಕಿನಾದ್ಯಂತ ಕಳ್ಳತನ ಪ್ರಕರಣಗಳು ಹೆಚ್ಚಾಗಿದ್ದು, ತಾಲ್ಲೂಕು ಆಡಳಿತ ಕಣ್ಮುಚ್ಚಿ ಕುಳಿತಿದೆ ಎಂದು ಘಟನೆ ಬೆನ್ನಲ್ಲೇ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.
ವರದಿ: ಆನಂದ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz