ತುಮಕೂರು: ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟ ದಾರುಣ ಘಟನೆ ತಿಪಟೂರು ತಾಲ್ಲೂಕಿನ ತಿಮ್ಲಾಪುರ- ಮತ್ತೀಹಳ್ಳಿ ಗೇಟ್ ಬಳಿ ಗುರುವಾರ ಬೆಳಗ್ಗೆ ನಡೆದಿದೆ.
ಶಿರಾ ಸಮೀಪದ ಕಡವಗೆರೆ ನಿವಾಸಿಗಳು ಮೃತಪಟ್ಟವರು ಎಂದು ತಿಳಿದು ಬಂದಿದೆ. ಕಾರಿನಲ್ಲಿದ್ದ ನಾಲ್ವರ ಪೈಕಿ ಮೂವರು ಮೃತಪಟ್ಟಿದ್ದು, ಓರ್ವ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ.
ವರದಿಗಳ ಪ್ರಕಾರ, ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಧರ್ಮಸ್ಥಳದ ಕಡೆಗೆ ಹೋಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz