ಬಳ್ಳಾರಿ: ಜಿಲ್ಲೆಯ ಸಂಡೂರಿನ ಜೈಸಿಂಗಪುರ ಬಳಿ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದ್ದು, ಕಬ್ಬಿಣದ ಅದಿರು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಕಾರಿಗೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ.
ಸಂಡೂರು ತಾಲೂಕಿನ ಲಕ್ಷ್ಮಿಪುರ ಗ್ರಾಮದ ನಿವಾಸಿಗಳಾದ ಆಶಾ (28 )ಜಯಲಕ್ಷ್ಮಿ (21), ಒಬ್ಬ ಬಾಲಕ ಮತ್ತು ಬಾಲಕಿ ಅಪಘಾತದಿಂದಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಕಾರು ಸಂಡೂರು ಪಟ್ಟಣದಿಂದ ಹೊಸಪೇಟೆ ಕಡೆಗೆ ತೆರಳುತ್ತಿತ್ತು. ಈ ವೇಳೆ ಹೊಸಪೇಟೆ ಕಡೆಯಿಂದ ವೇಗವಾಗಿ ಬಂದ ಅದಿರು ಲಾರಿಯು ಕಾರಿಗೆ ಡಿಕ್ಕಿ ಹೊಡೆದಿದೆ.ಕಾರಿನ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಲಾರಿ ಚಾಲಕ ಪರಾರಿಯಾಗಿದ್ದಾನೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW