ಸೈಜ್ ಕಲ್ಲು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯೊಂದು ಪಲ್ಟಿಯಾಗಿ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಭೀಕರ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಭ್ರಾಮರಿ ಕ್ರಾಸ್ ಬಳಿ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಕೋರೆ ಕಾರ್ಮಿಕರಾದ ಕೊಪ್ಪಳ ಜಿಲ್ಲೆಯ ಯಲಬುರ್ಗಿ ದೇವಲಾಪುರ ನಿವಾಸಿಗಳಾದ ಕರಿಯಪ್ಪ(26) ಮತ್ತು ನರಿಯಪ್ಪ(27) ಮೃತಪಟ್ಟಿದ್ದಾರೆ.
ಕಾರ್ಕಳ ಪುರಸಭೆಯ ಮಾಜಿ ಸದಸ್ಯರೊಬ್ಬರ ಮಾಲೀಕತ್ವದ ನಿಟ್ಟೆಯ ಭ್ರಾಮರಿ ಕ್ರಾಸ್ ಬಳಿಯ ಕಲ್ಲು ಕೋರೆಯಲ್ಲಿ ಶಿಲೆ ಕಲ್ಲು ಲೋಡ್ ಮಾಡಿಕೊಂಡು ಮಂಗಳೂರಿನ ಕಡೆ ತೆರಳುತ್ತಿದ್ದಾಗ ಕಡಿದಾದ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿ ಈ ದುರ್ಘಟನೆ ಭೀಕರ ಸಂಭವಿಸಿದೆ. ಅಪಘಾತದ ಸಂದರ್ಭದಲ್ಲಿ ಕಾರ್ಮಿಕರು ಹಿಂಬದಿಯಲ್ಲಿ ಕುಳಿತಿದ್ದರು ಎನ್ನಲಾಗಿದೆ. ಲಾರಿ ಪಟ್ಟಿಯಾಗುತ್ತಿದ್ದಂತೆಯೇ ಕಲ್ಲುಗಳು ಕಾರ್ಮಿಕರಾದ ಕರಿಯಪ್ಪ ಮತ್ತು ನರಿಯಪ್ಪ ಎಂಬವರ ಮೇಲೆ ಬಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296