ಧಾರವಾಡ, ನವೆಂಬರ್ 9 : ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಿಸಲು ಅವಕಾಶ ಪಾಲಿಕೆ ಅನುಮತಿ ಕೊಟ್ಟಿರುವುದರ ಬಗ್ಗೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ ಆಕ್ರೋಶ ವ್ಯಕ್ತಪಡಿಸಿದರು.
ಹುಬ್ಬಳ್ಳಿ-ಧಾರವಾಡ ಮಹಾನಗರ ಇಲಾಖೆ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯೆ ನೀಡಿದ ಮುತಾಲಿಕ್, ಬಿಜೆಪಿ ಆಡಳಿತದಲ್ಲಿ ಇರುವ ಪಾಲಿಕೆ ಟಿಪ್ಪು ಜಯಂತಿಗೆ ಅನುಮತಿ ದ್ರೋಹ ಮಾಡಿದೆ ಎಂದು ಕಿಡಿಕಾರಿದ್ದಾರೆ.
ಟಿಪ್ಪು ಜಯಂತಿಗೆ ಅವಕಾಶ ಮಾಡಿಕೊಟ್ಟು ಹಿಂದೂಗಳಿಗೆ ದ್ರೋಹ ಮಾಡಿದ್ದೀರಿ, ಇದನ್ನ ರದ್ದು ಮಾಡಿ ವಾಪಸ್ ಪಡೆಯಬೆಕು ಎಂದು ಅವರು ತಿಳಿಸಿದರು. ಗುರುವಾರ ಇದನ್ನು ವಿರೋಧಿಸಿ ನಾವು ಪ್ರತಿಭಟನೆ ಮಾಡುತ್ತೇವೆ ಎಂದು ಪಾಲಿಕೆಗೆ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ.
ಪಾಲಿಕೆಯಿಂದ ಷರತ್ತುಬದ್ಧ ಅನುಮತಿ
ಈದ್ಗಾ ಮೈದಾನದಲ್ಲಿ ಟಿಪ್ಪು ಸುಲ್ತಾನ್ ಜಯಂತಿ ಆಚರಿಸುವುದಕ್ಕಾಗಿ ಎಐಎಂಐಎಂ ಹಾಗೂ ಕೆಲವು ದಲಿತ ಸಂಘಟನೆಗಳಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅನುಮತಿ ಕೇಳಿದ್ದವು. ಇದರ ಬಗ್ಗೆ ಸುದೀರ್ಘ ಸಭೆ ನಡೆಸಿದ ಪಾಲಿಕೆ, ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಸೇರಿದಂತೆ ಎಲ್ಲಾ ಮಹನೀಯರ ಜಯಂತಿ ಆಚರಣೆಗೆ ಪಾಲಿಕೆ ಅನುಮತಿ ನೀಡಿದೆ.
ಇನ್ನು ಮುಂದೆ ಈದ್ಗಾ ಮೈದಾನದಲ್ಲಿ ಯಾವುದೇ ಧಾರ್ಮಿಕ ಕಾರ್ಯಕ್ರಮ ಮಾಡಬಹುದು. ಯಾರೇ ಕಾರ್ಯಕ್ರಮ ಮಾಡಿದರೆ ಹತ್ತು ಸಾವಿರ ಠೇವಣಿ ಇಡಬೇಕು. ಕಾನೂನು ಬಾಹಿರ ಚಟುವಟಿಕೆ ಮಾಡಬಾರದು ಎಂದು ಮಹಾನಗರ ಪಾಲಿಕೆ ಮೇಯರ್ ಈರೇಶ್ ಅಂಚಟಗೇರಿ ತಿಳಿಸಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


