ತಿಪಟೂರು: ಪಾಕಿಸ್ತಾನದ ವಿರುದ್ಧ ಭಾರತೀಯ ವಾಯು ಪಡೆ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಪ್ರಣವ್ ಬೆಳ್ಳೂರು ಅವರನ್ನು ಕಲ್ಪತರು ಸೆಂಟ್ರಲ್ ಸ್ಕೂಲ್ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.
ಪ್ರಣವ್ ಬೆಳ್ಳೂರು ಅವರು ಸೆಂಟ್ರಲ್ ಸ್ಕೂಲ್ ನ ಹಳೆಯ ವಿದ್ಯಾರ್ಥಿಯಾಗಿದ್ದಾರೆ. ಆಪರೇಷನ್ ಸಿಂಧೂರ್ ಯಶಸ್ವಿಗೊಳಿಸಿದ ತಂಡದಲ್ಲಿ ಒಬ್ಬರಾಗಿದ್ದಾರೆ. ಇವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶೌರ್ಯ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದ್ದಾರೆ ಎಂದು ಈ ಸಂದರ್ಭದಲ್ಲಿ ಮಾತನಾಡಿದ ಬಾಗೇಪಲ್ಲಿ ನಟರಾಜ್ ತಿಳಿಸಿದರು.
ಪ್ರಣವ್ ಬೆಳ್ಳೂರು ಅವರಿಗೆ ಅವರ ತಂದೆ ತಾಯಿಯ ಸಮ್ಮುಖದಲ್ಲಿ ಕಲ್ಪತರು ವಿದ್ಯಾ ಸಂಸ್ಥೆಯ ಪರವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಮಾರನಗೆ ರೆಸಂಗಮೇಶ್ ಮತ್ತು ಕಲ್ಪತರು ವಿದ್ಯಾ ಸಂಸ್ಥೆಯ ಅನೇಕ ಪದಾಧಿಕಾರಿಗಳು ಭಾಗವಹಿಸಿದ್ದರು.
ವರದಿ: ಆನಂದ್ ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


