ನವದೆಹಲಿ/ಬೆಂಗಳೂರು: ತಿಪಟೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ. ಷಡಕ್ಷರಿ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದ್ದು, ಅವರನ್ನು ದೆಹಲಿಯ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಹಿನ್ನೆಲೆಯಲ್ಲಿ, ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಶಾಸಕ ಷಡಕ್ಷರಿ ಅವರು ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ನವದೆಹಲಿಗೆ ತೆರಳಿದ್ದರು. ದೆಹಲಿಯ ಕರ್ನಾಟಕ ಭವನದಲ್ಲಿದ್ದ ಸಂದರ್ಭದಲ್ಲಿ ಅವರಿಗೆ ದಿಢೀರ್ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ.
ಅವರ ಜೊತೆಯಲ್ಲಿದ್ದ ವಿಧಾನ ಪರಿಷತ್ ಸದಸ್ಯ (ಎಮ್ ಎಲ್ ಸಿ) ರಾಜೇಂದ್ರ ರಾಜಣ್ಣ ಅವರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಷಡಕ್ಷರಿ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ. ಸದ್ಯ ಅವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


