ತಿಪಟೂರು: ತಾಲ್ಲೂಕಿನ ಹಾಲುಗೌಡನಕಟ್ಟೆ ಗ್ರಾಮದ ಶ್ರೀ ಶನೇಶ್ವರಸ್ವಾಮಿ ದೇವಸ್ಥಾನದ ಜೀರ್ಣೋದ್ದಾರಕ್ಕಾಗಿ ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ.1 ಲಕ್ಷ ಮೊತ್ತದ ಡಿಡಿ ಮಂಜೂರುಗೊಳಿಸಿದ್ದಾರೆ ಎಂದು ತಾಲ್ಲೂಕಿನ ಯೋಜನಾಧಿಕಾರಿ ಉದಯ್ ಕೆ. ತಿಳಿಸಿದರು.
ಇದೇ ವೇಳೆ ಗ್ರಾಮಸ್ಥರಿಗೆ ಚೆಕ್ ವಿತರಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಆನಂದ್ ಕುಮಾರ್,ಚಂದ್ರಯ್ಯ, ಗುಡಿಗೌಡರಾದ ಲೋಕೇಶ್ ಕಮಿಟಿ ಅಧ್ಯಕ್ಷರಾದ ಮಹಲಿಂಗಪ್ಪ, ಸದಸ್ಯರಾದ ಚಿಕ್ಕಣ್ಣ ಯೋಜನೆಯ ತಾಲ್ಲೂಕು ಕೃಷಿ ಅಧಿಕಾರಿ ಪ್ರಮೋದ್ ಕುಮಾರ್, ಮೇಲ್ವಿಚಾರಕಿ ರಮ್ಯಾ, ಸೇವಾಪ್ರತಿನಿಧಿ ಮಂಜುಳ ಹಾಗೂ ಗ್ರಾಮದ ಭಕ್ತಾದಿಗಳು ಉಪಸ್ಥಿತರಿದ್ದರು.
ವರದಿ: ಆನಂದ್, ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


