ತಿಪಟೂರು: ತಾಲೂಕಿನ ಬಿಳಿಗೆರೆ ವಲಯದ ಕೆ.ಬಿ. ಕ್ರಾಸ್ ನ ನೊಳಂಬ ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕೇಂದ್ರದ ವತಿಯಿಂದ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ವಿಶೇಷ ಟ್ಯೂಷನ್ ತರಗತಿಗಳನ್ನು ಉದ್ಘಾಟಿಸಲಾಯಿತು.
ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ಜಿಲ್ಲಾ ನಿರ್ದೇಶಕರಾದ ಸತೀಶ್ ಸುವರ್ಣ ಅವರು ಮಾತನಾಡಿ, “ವಿದ್ಯಾರ್ಥಿಗಳು ತಮಗೆ ದೊರೆತಿರುವ ಈ ಶೈಕ್ಷಣಿಕ ಸೌಲಭ್ಯವನ್ನು ಸರಿಯಾಗಿ ಸದುಪಯೋಗಪಡಿಸಿಕೊಳ್ಳಬೇಕು. ಶ್ರದ್ಧೆಯಿಂದ ಅಭ್ಯಾಸ ಮಾಡಿ ಎಲ್ಲಾ ಮಕ್ಕಳು ಉನ್ನತ ಶ್ರೇಣಿಯಲ್ಲಿ (ಡಿಸ್ಟಿಂಕ್ಷನ್) ಉತ್ತೀರ್ಣರಾಗುವತ್ತ ಹೆಚ್ಚಿನ ಗಮನಹರಿಸಬೇಕು” ಎಂದು ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ತಿಪಟೂರು ಗ್ರಾಮಾಂತರ ತಾಲೂಕಿನ ಯೋಜನಾಧಿಕಾರಿ ಸುರೇಶ್ ಕೆ., ಶಾಲೆಯ ಮುಖ್ಯ ಶಿಕ್ಷಕ ಮುರಳಿ, ಸಹಶಿಕ್ಷಕರಾದ ಪರಮೇಶ್, ಮಂಜುಶ್ರೀ, ಜ್ಞಾನವಿಕಾಸ ಸಮನ್ವಯಾಧಿಕಾರಿ ಭಾಗ್ಯಲಕ್ಷ್ಮಿ, ವಲಯ ಮೇಲ್ವಿಚಾರಕ ರಮೇಶ್ ಜಿ., ಸೇವಾಪ್ರತಿನಿಧಿ ಮಂಗಳ ಸೇರಿದಂತೆ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವರದಿ: ಆನಂದ್ ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
