ತಿಪಟೂರು: ನಗರದ ಕೃಷಿಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಎರಡು ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ನೂತನ ನಂದಿನಿ ಕ್ಷೀರ ಭವನವನ್ನು ಮಾರ್ಚ್ 23ರ ಭಾನುವಾರ ಲೋಕಾರ್ಪಣೆ ಮಾಡಲಾಗುವುದು ಎಂದು ಕರ್ನಾಟಕ ಹಾಲು ಮಹಾ ಮಂಡಳಿಯ ನಿರ್ದೇಶಕ ಮಾದಿಹಳ್ಳಿ ಎಂ.ಕೆ.ಪ್ರಕಾಶ್ ತಿಳಿಸಿದರು.
ಈ ಕ್ಷೀರ ಭವನದ ಉದ್ಘಾಟನೆಯನ್ನು ಕೇಂದ್ರ ರೈಲ್ವೆ ಸಚಿವ ಹಾಗೂ ಜಲಶಕ್ತಿ ಖಾತೆಯ ಸಹಾಯಕ ಸಚಿವ ವಿ.ಸೋಮಣ್ಣ ಗೃಹ ಸಚಿವ ಡಾ.ಜಿ,ಪರಮೇಶ್ವರ್ ಉದ್ಘಾಟಿಸಲಿದ್ದಾರೆ. ಸಭಾಂಗಣದ ಉದ್ಘಾಟನೆಯನ್ನು ಕೆ.ಎನ್.ರಾಜಣ್ಣ ಹಾಗೂ ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್ ಹಾಗೂ ಉಗ್ರಾಣದ ಕೊಠಡಿಯನ್ನು ಶಾಸಕ ಕೆ.ಷಡಕ್ಷರಿ ಉದ್ಘಾಟಿಸುವರು ಎಂದು ಅವರು ತಿಳಿಸಿದರು.
ನಾನು ಜಿಲ್ಲೆಯ ನಿರ್ದೇಶಕರಲ್ಲಿ ಹಿರಿಯವನಾಗಿದ್ದು ಈ ಬಾರಿ ಸುಮಲ ಅಧ್ಯಕ್ಷರ ಚುನಾವಣೆಯಲ್ಲಿ ಆಕಾಂಕ್ಷಿಯಾಗಿದ್ದೆ, ಆದರೆ ರಾಜಕೀಯ ಕಾರಣಗಳಿಂದ ಅಧ್ಯಕ್ಷ ಸ್ಥಾನದಿಂದ ವಂಚಿತನಾಗಿದು ವಪಕ್ಷನಿಷ್ಠನಾಗಿ ಹಿರಿಯರ ಆಯ್ಕೆಯನ್ನು ಒಪ್ಪಿಕೊಂಡಿದ್ದೇನೆ. ಮುಂದೆ ಕೆಎಂಎಫ್ ನಿರ್ದೇಶಕ ಸ್ಥಾನದ ಆಕಾಂಕ್ಷಿಯಾಗಿದ್ದು, ಗೆಲ್ಲುವ ವಿಶ್ವಾಸವಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ವಿಸ್ತರಣಾ ಅಧಿಕಾರಿ ದಿವಾಕರ್ ಮಲ್ಲಿಕಾರ್ಜುನ್ ಸುನಿಲ್ ಅಭಿಷೇಕ್ ಸಿಬ್ಬಂದಿ ನವೀನ್ ಕುಮಾರ್ ಹಾಜರಿದ್ದರು.
ವರದಿ: ಆನಂದ್, ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4