nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಕಂಪ್ಯೂಟರ್ ಡಿಟಿಪಿ ತರಬೇತಿಗೆ ಅರ್ಜಿ ಆಹ್ವಾನ

    May 21, 2026

    ಪ್ರಥಮ ಬಿ.ಸಿ.ಎ. ಪದವಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    May 20, 2026

    ಕುಣಿಗಲ್ ಪುರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    May 20, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಕಂಪ್ಯೂಟರ್ ಡಿಟಿಪಿ ತರಬೇತಿಗೆ ಅರ್ಜಿ ಆಹ್ವಾನ
    • ಪ್ರಥಮ ಬಿ.ಸಿ.ಎ. ಪದವಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
    • ಕುಣಿಗಲ್ ಪುರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    • ತುಮಕೂರು: ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಸಿನಿಮಾ ಮುಹೂರ್ತ ಸಮಾರಂಭ
    • ತುಮಕೂರು: ಪಾದರಕ್ಷೆ ತಯಾರಿಕಾ ಸ್ಪರ್ಧೆಗೆ ಅರ್ಜಿ
    • ಭೀಕರ ಅಪಘಾತ: ಶನಿಮಹಾತ್ಮ ದೇವಾಲಯ ವ್ಯವಸ್ಥಾಪಕ ಜಗನ್ನಾಥ್ ನಿಧನ
    • ನೈರ್ಮಲ್ಯ ಕಾಪಾಡಿ, ಗರ್ಭಾಶಯದ ಕ್ಯಾನ್ಸರ್ ತಡೆಗಟ್ಟಿ: ಮಹಿಳೆಯರಿಗೆ ಕಾವೇರಿ ಎನ್. ಕರೆ
    • ಪೌತಿ ಖಾತೆ, ಕಂದಾಯ ಗ್ರಾಮ ಹಕ್ಕುಪತ್ರ, ಪೋಡಿ ಮುಕ್ತ ಅಭಿಯಾನ: ರೈತರ ಅಲೆದಾಟ ತಪ್ಪಿಸಲು ಸರ್ಕಾರದ ಮಹತ್ವದ ಕ್ರಮ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಿಪಟೂರು | ರಾಗಿ ಬೆಳೆಗೆ ಡ್ರೋನ್ ಬಳಸಿ ನ್ಯಾನೋ ಯೂರಿಯಾ ಸಿಂಪಡಣೆ ಪ್ರಾತ್ಯಕ್ಷಿಕೆ
    ತಿಪಟೂರು September 30, 2025

    ತಿಪಟೂರು | ರಾಗಿ ಬೆಳೆಗೆ ಡ್ರೋನ್ ಬಳಸಿ ನ್ಯಾನೋ ಯೂರಿಯಾ ಸಿಂಪಡಣೆ ಪ್ರಾತ್ಯಕ್ಷಿಕೆ

    By adminSeptember 30, 2025No Comments2 Mins Read
    drone

    ತಿಪಟೂರು: ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ಅರಳಗುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊಲ್ಲರಹಟ್ಟಿ ಗ್ರಾಮದಲ್ಲಿ ಕೃಷಿ ಇಲಾಖೆ ಮತ್ತು ಇಸ್ರೋ ಸಂಸ್ಥೆ ಸಹಯೋಗದೊಂದಿಗೆ ರಾಷ್ಟ್ರೀಯ ಆಹಾರ ಮತ್ತು ಪೌಷ್ಟಿಕ ಭದ್ರತಾ ಯೋಜನೆಯಡಿ ರಾಗಿ ಬೆಳೆಗೆ ಡ್ರೋನ್  ಬಳಸಿ ನ್ಯಾನೋ ಯೂರಿಯಾ ಸಿಂಪಡಣೆ ಪ್ರಾತ್ಯಕ್ಷಿಕೆ ನಡೆಯಿತು.

    ಶಾಸಕ ಕೆ.ಷಡಕ್ಷರಿ ಮಾತನಾಡಿ, ಹೆಚ್ಚುತ್ತಿರುವ ಜನಸಂಖ್ಯೆಗೆ ಆಹಾರ ಒದಗಿಸುವ ಸದುದ್ದೇಶದಿಂದ ಈ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ, ಆಹಾರ ಬೆಳೆಗಳ ವಿಸ್ತೀರ್ಣ, ಉತ್ಪಾದನೆ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವುದು ಯೋಜನೆ ಮುಖ್ಯ ಗುರಿ. ಕೃಷಿಯಲ್ಲಿ ಸುಧಾರಿತ ಬೇಸಾಯ ಕ್ರಮ ಅಳವಡಿಸಿಕೊಂಡು ಉತ್ತಮ ಇಳುವರಿ ಪಡೆಯಬಹುದು ಎಂದು ತಿಳಿಸಿದರು.


    Provided by
    Provided by

    ಕೃಷಿ ಕಾರ್ಮಿಕರ ಕೊರತೆ ಇಂದಿನ ದಿನಗಳಲ್ಲಿ ಒಂದು ದೊಡ್ಡ ಸಮಸ್ಯೆಯಾಗಿದೆ. ಸಸ್ಯ ಪೋಷಕಾಂಶಗಳು ಮತ್ತು ಸಸ್ಯ ಸಂರಕ್ಷಣಾ ಔಷಧಿಗಳನ್ನು ಸಿಂಪರಣೆ ಮಾಡಲು ಹೆಚ್ಚು ಸಮಯ ಮತ್ತು ಹಣ ವ್ಯಯವಾಗುತ್ತದೆ. ಈ ಸಮಸ್ಯೆಗೆ ಪರಿಹಾರವಾಗಿ ಡ್ರೋನ್ ಬಳಸಿ ಸಿಂಪಡಣೆ ಮಾಡುವುದು ಉತ್ತಮ ಮಾರ್ಗ ಎಂದರು.

    ಸಹಾಯಕ ಕೃಷಿ ನಿರ್ದೇಶಕ ಎಂ.ಪಿ.ಪವನ್‌ ಮಾತನಾಡಿ, ತಾಲ್ಲೂಕಿನ 400 ಹೆಕ್ಟೇರ್ ಪ್ರದೇಶದಲ್ಲಿ ರಾಗಿ ಬೆಳೆಗೆ ಈ ಪ್ರಾತ್ಯಕ್ಷಿಕೆ ನಡೆಸಲಾಗಿದೆ ಎಂದರು.

    ವ್ಯವಸಾಯದಲ್ಲಿ ಯೂರಿಯಾದ ಅತಿಯಾದ ಬಳಕೆಯು ಮಣ್ಣಿನ ಆರೋಗ್ಯ, ಬೆಳೆ ಇಳುವರಿ ಮತ್ತು ಪರಿಸರದ ಮೇಲೆ ಹಾನಿಕಾರಕ ಪರಿಣಾಮ ಬೀರುತ್ತದೆ. ನ್ಯಾನೋ ಯೂರಿಯಾ ಸಿಂಪಡಣೆಯು ಈ ಸಮಸ್ಯೆಗಳಿಗೆ ಪರಿಹಾರವಾಗಿದೆ. ನ್ಯಾನೋ ಯೂರಿಯಾವನ್ನು ಎರಡರಿಂದ ನಾಲ್ಕು ಮಿಲಿ ಪ್ರತಿ ಲೀಟರ್ ನೀರಿಗೆ ಮಿಶ್ರಣ ಮಾಡಿ ಎರಡು ಹಂತಗಳಲ್ಲಿ ಸಿಂಪಡಣೆ ಮಾಡಬೇಕು ಎಂದರು.

    ಪ್ರಗತಿಪರ ರೈತ ರೇಣುಕಾಮೂರ್ತಿ ಭದ್ರಾಪುರ ಮಾತನಾಡಿ, ಡ್ರೋನ್‌ ಬಳಸಿ ನ್ಯಾನೋ ಯೂರಿಯಾ ತಂತ್ರಜ್ಞಾನ ರೈತರು ಅಳವಡಿಸಿಕೊಂಡರೆ ಕಾರ್ಮಿಕ ಸಮಸ್ಯೆ ಮತ್ತು ಖರ್ಚು ಕಡಿಮೆಯಾಗಿ ಉತ್ತಮ ಆದಾಯ ಗಳಿಸಬಹುದು ಎಂದರು.

    ಅರಳಗುಪ್ಪೆ ಗ್ರಾಮಪಂಚಾಯಿತಿ ಅಧ್ಯಕ್ಷ ಸುಜಾತ, ಸದಸ್ಯರಾದ ಮಂಜುಳ ಮತ್ತು ಮುನಿಸ್ವಾಮಿ, ಕೃಷಿ ಅಧಿಕಾರಿ ವಿನುತಾ ಟಿ.ಎಸ್., ಆತ್ಮಯೋಜನೆ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕ ಮಹೇಶ್‌ ಮತ್ತು ಇತರ ಸಿಬ್ಬಂದಿ ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬಸವಣ್ಣ ಯಾವುದೇ ಜಾತಿಗೆ ಸೀಮಿತವಲ್ಲ: ಕೊಟ್ಟೇಶ್ ಎಸ್.ಉಪ್ಪಾರ್

    May 15, 2026

    ತಿಪಟೂರು: ಎಟಿಎಂ ಯಂತ್ರ ಒಡೆದು 5 ಲಕ್ಷಕ್ಕೂ ಅಧಿಕ ಹಣ ದರೋಡೆ

    May 8, 2026

    ಕನ್ನಡ ಸಾಹಿತ್ಯ ದ್ವೇಷ ಸಾಹಿತ್ಯದ ಹಿಂದೆ ಚಲಿಸುತ್ತಿರುವುದು, ವಿಷಾದನೀಯ: ಚಿಂತಕ ಪ್ರೊ. ಕೃಷ್ಣಮೂರ್ತಿ ಬಿಳಿಗೆರೆ

    May 7, 2026

    Leave A Reply Cancel Reply

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಕಂಪ್ಯೂಟರ್ ಡಿಟಿಪಿ ತರಬೇತಿಗೆ ಅರ್ಜಿ ಆಹ್ವಾನ

    May 21, 2026

    ತುಮಕೂರು: ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ಹಾಗೂ ಕೇಂದ್ರ ಸರ್ಕಾರದ ಗ್ರಾಮೀಣ ಅಭಿವೃದ್ಧಿ ಸಚಿವಾಲಯದಡಿಯಲ್ಲಿ ನಡೆಯುತ್ತಿರುವ ಎಸ್.ಬಿ.ಐ.…

    ಪ್ರಥಮ ಬಿ.ಸಿ.ಎ. ಪದವಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    May 20, 2026

    ಕುಣಿಗಲ್ ಪುರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    May 20, 2026

    ತುಮಕೂರು: ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಸಿನಿಮಾ ಮುಹೂರ್ತ ಸಮಾರಂಭ

    May 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.