nammatumakuru

    Subscribe to Updates

    Get the latest creative news from FooBar about art, design and business.

    What's Hot

    80ನೇ ಸ್ವಾತಂತ್ರ್ಯ ದಿನಾಚರಣೆ: ಹುತಾತ್ಮರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳಿಂದ ಪ್ರತಿಜ್ಞೆ!

    August 15, 2026

    ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ

    August 15, 2026

    ಪ್ರಾಣತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನ ಇವತ್ತೀನ ಯುವ ಪೀಳಿಗೆ ಅರಿಯಬೇಕು: ತಹಶೀಲ್ದಾರ್ ಮಂಜುನಾಥ್

    August 15, 2026
    Facebook Twitter Instagram
    ಟ್ರೆಂಡಿಂಗ್
    • 80ನೇ ಸ್ವಾತಂತ್ರ್ಯ ದಿನಾಚರಣೆ: ಹುತಾತ್ಮರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳಿಂದ ಪ್ರತಿಜ್ಞೆ!
    • ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ
    • ಪ್ರಾಣತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನ ಇವತ್ತೀನ ಯುವ ಪೀಳಿಗೆ ಅರಿಯಬೇಕು: ತಹಶೀಲ್ದಾರ್ ಮಂಜುನಾಥ್
    • ಬೀದರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ: ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ
    • ಸ್ವಾತಂತ್ರ್ಯ ದಿನ ಕೇವಲ ಸರ್ಕಾರಿ ಕಾರ್ಯಕ್ರಮವಲ್ಲ, ನಮ್ಮೆಲ್ಲರ ಹಬ್ಬ: ಪ್ರಾಂಶುಪಾಲ ಡಾ.ಶಶಿಕುಮಾರ್ ಎಚ್.ಸಿ.
    • ಮಹಾರಾಜವಾಡಿಯಲ್ಲಿ ಅದ್ಧೂರಿಯಾಗಿ ಜರುಗಿದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
    • ತುಮಕೂರು: 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ — ಶ್ರೀಮಠ ಹಾಗೂ ಕ್ರೀಡಾಂಗಣದಲ್ಲಿ ಡಾ.ಜಿ.ಪರಮೇಶ್ವರ್ ಧ್ವಜಾರೋಹಣ
    • ತುಮಕೂರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಿಪಟೂರು  | ಕೊಳಚೆ ನೀರಿನ ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಪ್ರತಿಭಟನೆ
    ತಿಪಟೂರು October 28, 2025

    ತಿಪಟೂರು  | ಕೊಳಚೆ ನೀರಿನ ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಪ್ರತಿಭಟನೆ

    By adminOctober 28, 2025No Comments2 Mins Read
    tipaturu protest

    ತಿಪಟೂರು: ನಗರದಲ್ಲಿ ಯುಜಿಡಿ ಅವ್ಯವಸ್ಥೆ ಹಾಗೂ ತಿಪಟೂರು ಮತ್ತು ಈಚನೂರು ಕೆರೆಗೆ ನೀರು ತುಂಬಿಸಲು ಒತ್ತಾಯಿಸಿ ನಗರದ ಕೆಂಪಮ್ಮದೇವಿ ದೇವಸ್ಥಾನದಿಂದ ಸಿಂಗೀ ನಂಜಪ್ಪ ವೃತ್ತದವರೆಗೆ ಸೋಮವಾರ ಪಾದಯಾತ್ರೆ ನಡೆಸಿ ಪ್ರತಿಭಟಿಸಿ ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಲಾಯಿತು.

    ಜೆಡಿಎಸ್‌ ಮುಖಂಡ ಕೆ.ಟಿ.ಶಾಂತಕುಮಾರ್ ಮಾತನಾಡಿ, ತಾಲ್ಲೂಕಿನ ಜನರಿಗೆ ಕಂಟಕವಾಗಿರುವ ಯುಜಿಡಿ ಕೊಳಚೆ ನೀರಿನಿಂದ ಈಚನೂರು ಕೆರೆ ಕಲುಷಿತವಾಗಿದೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಲಿದೆ. ತಿಪಟೂರು ಅಮಾನಿಕೆರೆಗೆ ನೀರು ತುಂಬದ ಕಾರಣ ಕುಡಿಯುವ ನೀರಿಗೆ ಹೆಚ್ಚಿನ ಸಮಸ್ಯೆ ಉಂಟಾಗಿದೆ. ತಾಲ್ಲೂಕು ಅಭಿವೃದ್ಧಿ ಶೂನ್ಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಯುಜಿಡಿ ಕೊಳಚೆ ನೀರಿನಿಂದ ನಗರ ರಾಜ್ಯದಾದ್ಯಂತ ಅಪಖ್ಯಾತಿ ಪಡೆಯುತ್ತಿದೆ. ನಗರಸಭೆ ಅಧಿಕಾರಿಗಳ ಬೇಜವಾಬ್ದಾರಿಯಿಂದ ಈಡೇನಹಳ್ಳಿ ವೆಟ್‌ ವೆಲ್ ಹಾಗೂ ಗೊರಗೊಂಡನಹಳ್ಳಿ ವೆಟ್‌ವೆಲ್‌ ಗಳು ಸರಿಯಾಗಿ ಕಾರ್ಯನಿರ್ವಹಣೆ ಮಾಡದ ಕಾರಣ ಕೋಡಿಸರ್ಕಲ್‌ ಬಳಿ ಯುಜಿಡಿ ನೀರು ಉಕ್ಕಿಹರಿಯುತ್ತಿದೆ. ಜನಸಾಮಾನ್ಯರು ಸಂಚಾರ ಕಷ್ಟಕರವಾಗಿದೆ. ಕೊಳಚೆ ನೀರು ಹಳ್ಳಗಳ ಮೂಲಕ ಹಿಂಡಿಸ್ಕೆರೆ ನಂತರ ಈಚನೂರು ಕೆರೆ ಸೇರುತ್ತದೆ. ನಗರದ ಜನ ಪುನಃ ಕೊಳಚೆ ನೀರನ್ನೇ ಕುಡಿಯುವ ದುಃಸ್ಥಿತಿಗೆ ಬರುತ್ತದೆ. ನಗರದ ಹಾಸನ ರಸ್ತೆ, ಹಾಲ್ಕುರಿಕೆ ರಸ್ತೆ, ಶೆಟ್ಟಿಕೆರೆ ರಸ್ತೆ ಸೇರಿ ಬಹುತೇಕ ರಸ್ತೆಗಳು ಗುಂಡಿಬಿದ್ದು ಯಮ ಸ್ವರೂಪಿಯಾಗಿವೆ ಎಂದರು.

    ನಗರಸಭೆ ಪೌರಾಯುಕ್ತರು ಸಾರ್ವಜನಿಕರ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಪೌರಾಯುಕ್ತರು ವರ್ಗಾವಣೆ ಮಾಡಿಸಿ ಇಲ್ಲದೇ ಹೋದರೆ ನಗರಸಭೆ ಮುಂಭಾಗ ಉಪವಾಸ ಸತ್ಯಾಗ್ರಹ ನಡೆಸುವ ಎಚ್ಚರಿಕೆ ನೀಡಿದರು.

    ಜೆಡಿಎಸ್‌ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮತ್ತಿಘಟ್ಟ ಶಿವಸ್ವಾಮಿ ಮಾತನಾಡಿ, ತಾಲ್ಲೂಕಿನ ಯಾವುದೇ ಅಭಿವೃದ್ಧಿ ಕೆಲಸ ನಡೆಯುತ್ತಿಲ್ಲ. ಗ್ಯಾರಂಟಿ ಯೋಜನೆಗೆ ಹಣ ಖರ್ಚು ಮಾಡಿ, ಅಭಿವೃದ್ಧಿ ಕೆಲಸಗಳಿಗೆ ಹಣವಿಲ್ಲದೆ ಖಜಾನೆ ಖಾಲಿಯಾಗಿದೆ. ಯುಜಿಡಿ ಕೇವಲ ಹಣ ನುಂಗಲು ದಾರಿ ಮಾಡಿಕೊಂಡಿದ್ದಾರೆ. ಈಚನೂರು ಕೆರೆ ಕಲುಷಿತವಾಗಿದ್ದು ಈ ನೀರು ಕುಡಿದರೆ, ಅಪಾಯಕಾರಿ ರೋಗಗಳಿಗೆ ತುತ್ತಾಗುವ ಆತಂಕವಿದೆ. ರಸ್ತೆಗುಂಡಿ ಮುಚ್ಚಲು ಸರ್ಕಾರದಲ್ಲಿ ಹಣವಿಲ್ಲ. ಜಿಲ್ಲಾಧಿಕಾರಿ ನಗರದ ಯುಜಿಡಿ ಸಮಸ್ಯೆಗೆ ಪರಿಹಾರ ನೀಡಿ ಎಂದು ಒತ್ತಾಯಿಸಿದರು.

    ನಗರ ಯುವ ಘಟಕದ ಅಧ್ಯಕ್ಷ ಗೊರಗೊಂಡನಹಳ್ಳಿ ಸುದರ್ಶನ್, ಷಡಕ್ಷರಿ, ರಾಜು, ಧನಂಜಯ್ ಪೆದ್ದಿಹಳ್ಳಿ, ನಟರಾಜ್ ಷಡಕ್ಷರಿ, ರಾಜಶೇಖರ್, ಸತೀಶ್ ಮಾರನಗೆರೆ, ಜಕ್ಕನಹಳ್ಳಿ ಮೋಹನ್‌, ಕವಿತಾ ಮಹೇಶ್ ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸ್ವಾತಂತ್ರ್ಯ ದಿನ ಕೇವಲ ಸರ್ಕಾರಿ ಕಾರ್ಯಕ್ರಮವಲ್ಲ, ನಮ್ಮೆಲ್ಲರ ಹಬ್ಬ: ಪ್ರಾಂಶುಪಾಲ ಡಾ.ಶಶಿಕುಮಾರ್ ಎಚ್.ಸಿ.

    August 15, 2026

    ತಿಪಟೂರು: ಶಾಖಾ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ ಮತ್ತು ಮಕ್ಕಳ ಜಾಗೃತಿ ಕಾರ್ಯಕ್ರಮ

    August 13, 2026

    ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

    August 10, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    80ನೇ ಸ್ವಾತಂತ್ರ್ಯ ದಿನಾಚರಣೆ: ಹುತಾತ್ಮರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳಿಂದ ಪ್ರತಿಜ್ಞೆ!

    August 15, 2026

    ತುಮಕೂರು: ದೇಶಾದ್ಯಂತ ಶಿಕ್ಷಣದ ಖಾಸಗೀಕರಣ, ಆರೋಗ್ಯ ಕ್ಷೇತ್ರ ವ್ಯಾಪಾರೀಕರಣಗೊಳ್ಳುತ್ತಿರುವುದು, ದಿನೇ ದಿನೇ ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆ ಹಾಗೂ ಹೆಣ್ಣುಮಕ್ಕಳ ಮೇಲಿನ…

    ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ

    August 15, 2026

    ಪ್ರಾಣತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನ ಇವತ್ತೀನ ಯುವ ಪೀಳಿಗೆ ಅರಿಯಬೇಕು: ತಹಶೀಲ್ದಾರ್ ಮಂಜುನಾಥ್

    August 15, 2026

    ಬೀದರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ: ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ

    August 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.