ತುಮಕೂರು: ಭರ್ಜರಿ ಮಳೆಗೆ ಮರ ಮುರಿದು ಬಿದ್ದ ಪರಿಣಾಮ ಕಾರು ಜಖಂ ಆಗಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ನಡೆದಿದೆ.
ರಾತ್ರಿ ಸುರಿದ ಭರ್ಜರಿ ಮಳೆಗೆ ಮರ ಮುರಿದು ಬಿದ್ದಿದೆ. ಈ ವೇಳೆ ಮರದ ಕೆಳಗೆ ನಿಲ್ಲಿಸಲಾಗಿದ್ದ ಕಾರು ಜಖಂಗೊಂಡಿದೆ. ಮರ ಬಿದ್ದ ತೀವ್ರತೆಗೆ ಕಾರಿನ ಮೇಲ್ಭಾಗ ಸಂಪೂರ್ಣವಾಗಿ ಹಾನಿಗೊಳಗಾಗಿದೆ.
ಘಟನೆ ವೇಳೆ ಕಾರಿನಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ತಿಪಟೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW