ತುಮಕೂರು: ಚಲಿಸುತ್ತಿದ್ದ ಕಾರಿನ ಟೈರ್ ಬ್ಲಾಸ್ಟ್ ಆದ ಪರಿಣಾಮ ಓರ್ವ ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಬಳಿಯ ರಾಜ್ಯ ಹೆದ್ದಾರಿ 33ರಲ್ಲಿರುವ ರಾಜೇಂದ್ರ ಪುರ ಗೇಟ್ ಬಳಿ ನಡೆದಿದೆ.
ಮಂಡ್ಯ ಪಟ್ಟಣದ ಚಾಮರಾಜನಗರದ ನಿವಾಸಿ ಆಕರ್ಶ್ (28) ಮೃತ ದುರ್ದೈವಿ ಆಗಿದ್ದಾರೆ. ಕಾರಿನಲ್ಲಿದ್ದ ಶಶಾಂಕ್ ಗೌಡ, ಜ್ಞಾನೇಶ್ವರಿ, ಶಶಾಂಕ್ ಸೇರಿ ಮೂವರಿಗೆ ಗಂಭೀರ ಗಾಯಗಳಾಗಿವೆ.
ಕಾರಿನ ಟೈರ್ ಬ್ಲಾಸ್ಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಗುದ್ದಿದೆ. ಮಂಡ್ಯ ಮೂಲದ ನಾಲ್ವರು ತುಮಕೂರಿನಲ್ಲಿ ಮದುವೆ ಮುಗಿಸಿ ಮಂಡ್ಯ ಕಡೆಗೆ ತೆರಳುತ್ತಿದ್ರು. ಈ ವೇಳೆ ಕಾರಿನ ಟೈರ್ ಬ್ಲಾಸ್ಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದಿದೆ.
ಗಾಯಾಳುಗಳನ್ನ ಕುಣಿಗಲ್ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಹುಲಿಯೂರುದುರ್ಗ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಪ್ರಕರಣ ಸಂಬಂಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಯಗೊಂಡ ಶಶಾಂಕ್ ಗೌಡ ಹಾಗೂ ಜ್ಞಾನೇಶ್ವರಿ ಮದುವೆಯಾಗಿ ಕೇವಲ ಮೂರು ತಿಂಗಳಾಗಿತ್ತು. ಮೃತದೇಹ ಕುಣಿಗಲ್ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296