ತುಮಕೂರು: ಕೌಟುಂಬಿಕ ಕಲಹಕ್ಕೆ ಬೇಸತ್ತು ಇಬ್ಬರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಮಧುಗಿರಿ ತಾಲೂಕಿನ ಸಿದ್ದಪುರ ಕೆರೆಯಲ್ಲಿ ನಡೆದಿದೆ.
ಹಸೀನಾ ತಾಜ್ (35), ಅಫೀಜ್ (8), ಅಲ್ಕೀಜ್ (4) ಸಾವಿಗೆ ಶರಣಾದವರು ಎಂದು ಗುರುತಿಸಲಾಗಿದ್ದು, ಸಿದ್ದಪುರ ಕೆರೆಗೆ ಹಾರಿ ಇವರು ಸಾವಿಗೆ ಶರಣಾಗಿದ್ದಾರೆ.
ಮಧುಗಿರಿ ಪಟ್ಟಣದಲ್ಲಿ ಗಂಡ ಹಾಗೂ ಇಬ್ಬರು ಮಕ್ಕಳ ಜೊತೆ ವಾಸವಾಗಿದ್ದ ಹಸೀನಾ ತಾಜ್ ಇಂದು ಮಧುಗಿರಿ ಬಳಿಯಿರುವ ಸಿದ್ದಪುರ ಕೆರೆಗೆ ತನ್ನ ಇಬ್ಬರು ಮಕ್ಕಳ ಜೊತೆ ಕೆರೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗಂಡನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಹೇಳಲಾಗ್ತಿದೆ. ಸ್ಥಳಕ್ಕೆ ಮಧುಗಿರಿ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296