ಉಡುಪಿ: ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದಕ್ಕೆ ತುಪ್ಪದ ಬದಲು ಪ್ರಾಣಿಗಳ ಕೊಬ್ಬು ಬಳಸಿರುವ ಘಟನೆಯ ವಿರುದ್ಧ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಡಿಯೊ ಸಂದೇಶದಲ್ಲಿ ಮಾತನಾಡಿದ ಅವರು, ತಿರುಪತಿ ತಿರುಮಲ ದೇವಸ್ಥಾನದಲ್ಲಿ ಲಡ್ಡು ಪ್ರಸಾದಕ್ಕೆ ಆಕಳ ತುಪ್ಪದ ಬದಲು ಪ್ರಾಣಿಜನ್ಯ ಕೊಬ್ಬಿನ ಅಂಶ ಸೇರಿಸಿರುವ ಕೃತಕ ತುಪ್ಪ ಬಳಸಿರುವುದು ತಿಳಿದು ಖೇದವಾಗಿದೆ ಎಂದು ಹೇಳಿದ್ದಾರೆ.
ಇಂತಹ ಕೃತಕ ತುಪ್ಪ ತಯಾರಿಸುವ ಅಡ್ಡೆಗಳನ್ನು ಕಂಡುಹಿಡಿದು, ಇದರಲ್ಲಿ ತೊಡಗಿರುವವರಿಗೆ ಶಿಕ್ಷೆ ನೀಡಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಧಾರ್ಮಿಕ ಶ್ರದ್ಧಾಕೇಂದ್ರಗಳನ್ನು ಸರ್ಕಾರದ ಸುಪರ್ದಿಯಿಂದ ಮುಕ್ತವಾಗಿಸಿ ಹಿಂದೂ ಸಂಸ್ಥೆಗಳಿಗೆ ನೀಡಬೇಕು ಎನ್ನುವ ಸುಪ್ರೀಂ ಕೋರ್ಟ್ ತೀರ್ಪು ಸತ್ಯ ಎನ್ನುವುದು ಇಂತಹ ಘಟನೆಗಳಿಂದ ತಿಳಿಯುತ್ತದೆ ಎಂದು ಅವರು ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q