ಅಖಿಲ ಭಾರತ ತೃಣಮೂಲ ಕಾಂಗ್ರೆಸ್‌ನ ಅಧಿಕೃತ ಟ್ವಿಟರ್ ಖಾತೆ ಹ್ಯಾಕ್ ಆಗಿದೆ. ತೃಣಮೂಲ ಕಾಂಗ್ರೆಸ್‌ನ ಅಧಿಕೃತ ಟ್ವಿಟರ್ ಖಾತೆಯನ್ನು ಮಂಗಳವಾರ ಹ್ಯಾಕ್ ಮಾಡಲಾಗಿದೆ. ಹ್ಯಾಕರ್‌ಗಳು ಪಾರ್ಟಿ ಅಕೌಂಟ್‌ನ ಡಿಸ್‌ಪ್ಲೇ ಇಮೇಜ್ ಅನ್ನು ಬದಲಾಯಿಸಿದ್ದಾರೆ ಮತ್ತು ಅದನ್ನು ‘ಯುಗಾ ಲ್ಯಾಬ್ಸ್’ ಎಂದು ಮರುನಾಮಕರಣ ಮಾಡಿದ್ದಾರೆ. ಸಮಸ್ಯೆ ಬಗೆಹರಿಸಲು ಪ್ರಯತ್ನ ಆರಂಭಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಹ್ಯಾಕಿಂಗ್ ಆದರೂ, ಖಾತೆಯಿಂದ ಯಾವುದೇ ಪೋಸ್ಟ್ ಕಾಣಿಸಿಕೊಂಡಿಲ್ಲ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ವರದಿಗಳ ಬಗ್ಗೆ ಅಧಿಕೃತ ಹೇಳಿಕೆ ನೀಡಿಲ್ಲ ಎಂಬುದು ಗಮನಾರ್ಹ. ಯುಗಾ ಲ್ಯಾಬ್ಸ್ ಯುಎಸ್ ಮೂಲದ ಬ್ಲಾಕ್‌ಚೈನ್ ತಂತ್ರಜ್ಞಾನ ಕಂಪನಿಯಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50s


