nammatumakuru

    Subscribe to Updates

    Get the latest creative news from FooBar about art, design and business.

    What's Hot

    ಫ್ರಿಜ್ ಬಾಗಿಲಲ್ಲಿ ಈ ಆಹಾರ ಪದಾರ್ಥಗಳನ್ನು ಇಟ್ರೆ ಏನಾಗುತ್ತೆ ಗೊತ್ತಾ?

    February 25, 2026

    ದೈಹಿಕ, ಮಾನಸಿಕ ಸದೃಢತೆಗೆ ನೌಕರರಿಗೆ ಕ್ರೀಡೆಗಳು ಅತ್ಯಗತ್ಯ: ಸಿಇಓ ಈಶ್ವರ ಕುಮಾರ್ ಕಾಂದೂ ಸಲಹೆ

    February 25, 2026

    ಮಾನವೀಯತೆಯ ಮೌಲ್ಯ ಮೆರೆದ ತುಮಕೂರು ಜಿಲ್ಲಾಡಳಿತ

    February 25, 2026
    Facebook Twitter Instagram
    ಟ್ರೆಂಡಿಂಗ್
    • ಫ್ರಿಜ್ ಬಾಗಿಲಲ್ಲಿ ಈ ಆಹಾರ ಪದಾರ್ಥಗಳನ್ನು ಇಟ್ರೆ ಏನಾಗುತ್ತೆ ಗೊತ್ತಾ?
    • ದೈಹಿಕ, ಮಾನಸಿಕ ಸದೃಢತೆಗೆ ನೌಕರರಿಗೆ ಕ್ರೀಡೆಗಳು ಅತ್ಯಗತ್ಯ: ಸಿಇಓ ಈಶ್ವರ ಕುಮಾರ್ ಕಾಂದೂ ಸಲಹೆ
    • ಮಾನವೀಯತೆಯ ಮೌಲ್ಯ ಮೆರೆದ ತುಮಕೂರು ಜಿಲ್ಲಾಡಳಿತ
    • ಮೀನುಗಾರರಿಗೆ ಸಲಕರಣೆ ಕಿಟ್ ವಿತರಿಸಿದ ಶಾಸಕ ಜೆ.ಎನ್.ಗಣೇಶ್
    • ಬಜೆಟ್ ಅಧಿವೇಶನದಲ್ಲಿ ಒಳಮೀಸಲು ಜಾರಿಗೊಳಿಸಿ: ತುಮಕೂರಿನಲ್ಲಿ ಬೃಹತ್ ಪ್ರತಿಭಟನೆ
    • ಅಂತರರಾಜ್ಯ ಜ್ಯುವೆಲರಿ ಸುಲಿಗೆಕೋರರ ಸೆರೆ:  ಕೃತ್ಯ ನಡೆದ 12 ತಾಸಿನೊಳಗೆ ಆರೋಪಿಗಳ ಬೆನ್ನಟ್ಟಿ ಬಂಧನ
    • ಶಿವಮೊಗ್ಗ: ಸಹಪಾಠಿಗಳ ಜಗಳ ಬಿಡಿಸಲು ಹೋದ SSLC  ವಿದ್ಯಾರ್ಥಿ ಬಲಿ
    • ರಾಜಕೀಯ ಕಾರಣಕ್ಕೆ ಹೆಚ್‌ ಡಿಕೆಯವರನ್ನು ಭೇಟಿಯಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಧಿಕಾರಕ್ಕೆ ಬರಲು ತತ್ವ ಸಿದ್ಧಾಂತಕ್ಕೆ ವಿಪಕ್ಷಗಳ ತಿಲಾಂಜಲಿ
    ರಾಜ್ಯ ಸುದ್ದಿ July 17, 2023

    ಅಧಿಕಾರಕ್ಕೆ ಬರಲು ತತ್ವ ಸಿದ್ಧಾಂತಕ್ಕೆ ವಿಪಕ್ಷಗಳ ತಿಲಾಂಜಲಿ

    By adminJuly 17, 2023No Comments2 Mins Read
    n ravikumar

    ವಿವಿಧ ವಿರೋಧ ಪಕ್ಷಗಳು ತಮ್ಮ ತತ್ವ- ಸಿದ್ಧಾಂತಗಳಿಗೆ ತಿಲಾಂಜಲಿ ಇಟ್ಟು ಅಧಿಕಾರಕ್ಕೆ ಬರಬೇಕೆಂದು ಏಕೈಕ ಉದ್ದೇಶದೊಂದಿಗೆ ಹೊರಟಿದ್ದಾರೆ. ಅದಕ್ಕಾಗಿ ಇದೇ 18 ರಂದು ವಿಪಕ್ಷಗಳ ಸಭೆ ನಡೆಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಆಕ್ಷೇಪಿಸಿದರು.

    ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿಜಿ ಅವರು 2047ರ ವೇಳೆಗೆ ಪ್ರಪಂಚದಲ್ಲಿ ಭಾರತವನ್ನು ನಂಬರ್ 1 ರಾಷ್ಟ್ರವಾಗಿ ಮಾಡುವ ದೂರದೃಷ್ಟಿಯನ್ನು ಇಟ್ಟುಕೊಂಡಿದ್ದಾರೆ. ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಭಾರತವನ್ನು ಪರಿವರ್ತಿಸುವ ಒಂದೇ ಕನಸು ಮೋದಿಜಿ ಅವರದು. ಪಾರ್ಟಿ ಬೆಳೆಸುವುದು, ಮತಬ್ಯಾಂಕ್ ದೃಢೀಕರಣದ ಉದ್ದೇಶ ಅವರದಲ್ಲ. ಅಂಥ ದುರುದ್ದೇಶದ ಚಿಂತನೆ ವಿಪಕ್ಷಗಳದು ಎಂದು ಟೀಕಿಸಿದರು.


    Provided by
    Provided by

    ನಿಸ್ವಾರ್ಥ ಮತ್ತು ದೂರದೃಷ್ಟಿಯ ಸಮರ್ಥ ನಾಯಕತ್ವವನ್ನು ಮೋದಿಜಿ ಕೊಡುತ್ತಿದ್ದು, ಅದನ್ನು ಜನರೂ ಅರ್ಥ ಮಾಡಿಕೊಂಡಿದ್ದಾರೆ ಎಂದು ನುಡಿದರು. ಮತ್ತೊಮ್ಮೆ ನರೇಂದ್ರ ಮೋದಿಜಿ ಅವರು ಪ್ರಧಾನಿ ಆಗಬೇಕೆಂಬ ಆಶಯ, ಅಭಿಲಾಶೆ ಜನರದು. ಅವರಿಗೆ ಅಧಿಕಾರ ಲಭಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಸದನ ಪ್ರಾರಂಭವಾಗಿ ಹತ್ತು ಹನ್ನೆರಡು ದಿನಗಳಾಗಿವೆ.

    ಕಾಂಗ್ರೆಸ್‌ ನವರು, ಸಿಎಂ ಅವರು ರಾಜ್ಯಪಾಲರ ಕುರಿತು, ಬಜೆಟ್ ವಿಚಾರದಲ್ಲಿ ಮಾತನಾಡುತ್ತಿಲ್ಲ. ಅವರು ಮುಂದಿನ ಸಂಸತ್ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು, ತಮಗೆ ಬಹುಮತ, 41 ಶೇ ಮತಪ್ರಮಾಣ ಬಂದಿದೆ ಎಂದು ಹೇಳುತ್ತಿದ್ದಾರೆ. ಶೇ 41 ಮತಗಳಿಕೆಗೂ ಬಜೆಟ್‌ ಗೂ ಏನು ಸಂಬಂಧ ಎಂದು ಪ್ರಶ್ನಿಸಿದರು.

    ಒಳ್ಳೆಯ ಬಜೆಟ್ ಕೊಟ್ಟಿದ್ದೀರಾ ಎಂದು ಕಾಂಗ್ರೆಸ್‌ ನವರನ್ನು ಕೇಳಿದ ಅವರು, ಅಲ್ಪಸಂಖ್ಯಾತರ ಪರವಾಗಿರುವ ಬಜೆಟನ್ನು ನೀವು ಕೊಟ್ಟಿದ್ದೀರಿ. ಯಾವುದೇ ಗುಡಿ ಗೋಪುರಗಳು, ಸಾಧುಸಂತರು, ಸ್ವಾಮೀಜಿಗಳು, ವ್ಯಾಪಾರಿ ವರ್ಗ, ಕುಶಲಕರ್ಮಿಗಳು ನೀವೇನು ಬಜೆಟ್‌ ನಲ್ಲಿ ನಯಾಪೈಸೆ ತೆಗೆದು ಇಟ್ಟಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಮದ್ಯಪ್ರಿಯರಿಗೆ ವಿಪರೀತ ತೆರಿಗೆ ಹೇರಿದ್ದೀರಿ.

    ಇದರ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಮಾತನಾಡುತ್ತಿಲ್ಲ. ನಾವು ಸಂಸತ್ ಚುನಾವಣೆಯಲ್ಲಿ
    ಗೆಲ್ಲುತ್ತೇವೆ ಎಂದು ಭಾಷಣ ಮಾಡುತ್ತಾರೆ. ಸಂಸತ್ ಚುನಾವಣೆಯಲ್ಲಿ ಸೀಟು ಗೆಲ್ಲುವ ಅಟೆಂಡ ಫಿಕ್ಸ್ ಮಾಡಿದ್ದಾರೆ. ಬಜೆಟ್, ರಾಜ್ಯಪಾಲರ ಮಾತಿನ ಕುರಿತು ಮಾತನಾಡುವುದಿಲ್ಲ ಎಂದು ಟೀಕಿಸಿದರು.

    ಆಡಳಿತ ಯಂತ್ರವನ್ನು ಲೋಕಸಭಾ ಚುನಾವಣೆಗೆ ಸಿದ್ಧ ಮಾಡುತ್ತಿದ್ದಾರೆ. ಭಾರತ ನಂಬರ್ ಒನ್ ಮಾಡುವ ಉದ್ದೇಶ ಇವರದಲ್ಲ. ಜನರಿಗೆ ಉದ್ಯೋಗ ನೀಡುವ ಬಜೆಟ್ ಕೊಟ್ಟಿಲ್ಲ. ಜನರ ಉದ್ಯೋಗ ಕಸಿಯುವ ಬಜೆಟ್ ಇದು ಎಂದು ಆರೋಪಿಸಿದರು. ಮಹಿಳೆಯರಿಗೆ ಉಚಿತ ಪ್ರಯಾಣ, ಪ್ರವಾಸ ಮಾಡಲಿ; ಅಡ್ಡಿ ಇಲ್ಲ. ಆದರೆ, ಕಾರ್ಮಿಕರಿಗೆ- ಕೃಷಿ ವರ್ಗಕ್ಕೆ ಏನು ಮಾಡಿದ್ದೀರಿ? ನೀರಾವರಿಗೆ ಎಷ್ಟು ಹಣ ಕೊಟ್ಟಿದ್ದೀರಿ? ರೈತರಿಗೆ ಏನು ಕೊಡುಗೆ ನೀಡಿದ್ದೀರಿ? ರಸ್ತೆಗಳ ಅಭಿವೃದ್ಧಿಗೆ ಏನು ಮಾಡುತ್ತೀರಿ? ಎಂದು ಪ್ರಶ್ನೆಗಳನ್ನು ಮುಂದಿಟ್ಟರು.

    ಮಳೆ ಇಲ್ಲ. ಉದ್ಯೋಗ ನೀಡಿಕೆಗೆ ಏನು ನಿಮ್ಮ ಯೋಜನೆ ಎಂದು ಕೇಳಿದ ಅವರು, ಖಾಸಗಿ ಬಸ್‌ ಆಟೋ ರಿಕ್ಷಾ, ಕ್ಯಾಬ್‌ ನವರಿಗೆ ಏನು ಮಾಡುತ್ತೀರಿ? ಸಣ್ಣ, ಗೃಹ ಕೈಗಾರಿಕೆಗಳ ಪುನಶ್ವೇತನಕ್ಕೆ ಏನು ಸರಕಾರದ ಹಣವನ್ನು ಕಾಂಗ್ರೆಸ್ ಪಾರ್ಟಿಯ ಪಂಚ ಗ್ಯಾರಂಟಿ ಯೋಜನೆಗಳಿಗೆ ಉಪಯೋಗಿಸುತ್ತಿರುವುದು ಜನರಿಗೆ ಅರ್ಥವಾಗಿದೆ. ಸಂಸತ್ ಚುನಾವಣೆಯಲ್ಲಿ ಜನರು ಕಾಂಗ್ರೆಸ್‌ ಗೆ ಪಾಠ ಕಲಿಸುವುದು ನಿಶ್ಚಿತ ಎಂದು ನುಡಿದರು.

    ಎನ್‌ ಡಿಎ ಸಭೆಗೆ ಜೆಡಿಎಸ್‌ ಗೆ ಆಹ್ವಾನ ಕುರಿತು ಪ್ರಶ್ನೆಗೆ ಉತ್ತರ ನೀಡಿದ ಅವರು, ಸಭೆಗೆ ಆಹ್ವಾನ ಕೊಟ್ಟಿರಬಹುದು; ನನಗೆ ತಿಳಿದು ಬಂದ ಮಾಹಿತಿ ಪ್ರಕಾರ ಕುಮಾರಸ್ವಾಮಿ ಮತ್ತು ದೇವೇಗೌಡರು ದೆಹಲಿಗೆ ಹೋಗಲಿದ್ದಾರೆ. ಇದರ ಬಗ್ಗೆ ನಡ್ಡಾಜಿ, ಅಮಿತ್ ಶಾ ಮತ್ತು ಪ್ರಧಾನಿಯವರು ನಿರ್ಧರಿಸಲಿದ್ದಾರೆ. ದೇಶದ ಒಳಿತನ್ನು ಗಮನಿಸಿ ನಿರ್ಣಯ ಕೈಗೊಳ್ಳಲಿದ್ದು, ಅದಕ್ಕೆ ಸಂಪೂರ್ಣ ಬೆಂಬಲ ನೀಡುತ್ತೇವೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಮೀನುಗಾರರಿಗೆ ಸಲಕರಣೆ ಕಿಟ್ ವಿತರಿಸಿದ ಶಾಸಕ ಜೆ.ಎನ್.ಗಣೇಶ್

    February 25, 2026

    ಶಿವಮೊಗ್ಗ: ಸಹಪಾಠಿಗಳ ಜಗಳ ಬಿಡಿಸಲು ಹೋದ SSLC  ವಿದ್ಯಾರ್ಥಿ ಬಲಿ

    February 24, 2026

    ರಾಜಕೀಯ ಕಾರಣಕ್ಕೆ ಹೆಚ್‌ ಡಿಕೆಯವರನ್ನು ಭೇಟಿಯಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ

    February 24, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಫ್ರಿಜ್ ಬಾಗಿಲಲ್ಲಿ ಈ ಆಹಾರ ಪದಾರ್ಥಗಳನ್ನು ಇಟ್ರೆ ಏನಾಗುತ್ತೆ ಗೊತ್ತಾ?

    February 25, 2026

    ಬೆಂಗಳೂರು: ಇಂದಿನ ದಿನಗಳಲ್ಲಿ ಫ್ರಿಜ್ ಪ್ರತಿಯೊಬ್ಬರ ಮನೆಯ ಅವಿಭಾಜ್ಯ ಅಂಗವಾಗಿದೆ. ಹಣ್ಣು, ತರಕಾರಿಗಳಿಂದ ಹಿಡಿದು ಮಿಕ್ಕಿದ ಆಹಾರದವರೆಗೆ ಎಲ್ಲವನ್ನೂ ನಾವು…

    ದೈಹಿಕ, ಮಾನಸಿಕ ಸದೃಢತೆಗೆ ನೌಕರರಿಗೆ ಕ್ರೀಡೆಗಳು ಅತ್ಯಗತ್ಯ: ಸಿಇಓ ಈಶ್ವರ ಕುಮಾರ್ ಕಾಂದೂ ಸಲಹೆ

    February 25, 2026

    ಮಾನವೀಯತೆಯ ಮೌಲ್ಯ ಮೆರೆದ ತುಮಕೂರು ಜಿಲ್ಲಾಡಳಿತ

    February 25, 2026

    ಮೀನುಗಾರರಿಗೆ ಸಲಕರಣೆ ಕಿಟ್ ವಿತರಿಸಿದ ಶಾಸಕ ಜೆ.ಎನ್.ಗಣೇಶ್

    February 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.