ಮಂಡ್ಯ: ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135ನೇ ಜಯಂತಿ ವಿಜಯೋತ್ಸವ ಸಂಭ್ರಮಾಚರಣೆ ಪ್ರಯುಕ್ತ ಮಂಡ್ಯದ ವ್ಯವಸಾಯ ಕಾಲೋನಿ ಗ್ರಾಮ, ಮಾರಗೌಡನಗಳ್ಳಿ, ಕೆರಗೋಡು ಹೋಬಳಿ ಮಂಡ್ಯ ತಾಲೂಕು ಇಲ್ಲಿ ಇಂದು (ಏ.13) ಅಂಬೇಡ್ಕರ್ ಹಬ್ಬ ಆಚರಣೆ ಮಾಡಲಾಗುತ್ತಿದೆ.
ಸಂಜೆ 5ರಿಂದ ಕಾರ್ಯಕ್ರಮ ಆರಂಭಗೊಂಡು ರಾತ್ರಿ 12.01ರವರೆಗೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿಶ್ರಾಂತ ಜಿಲ್ಲಾ ಹಾಗೂ ಸೆಷನ್ ನ್ಯಾಯಾಧೀಶರು ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ನಿಗಮದ ಕಾನೂನು ಸಲಹೆಗಾರರಾದ ಡಾ.ಬಾಬಾ ಸಾಹೇಬ್ ಜಿನರಾಳ್ಕರ್ ಅವರು ಅವರು ವಿಶೇಷ ವಿಷಯ ಮಂಡನೆ ಮಾಡಲಿದ್ದಾರೆ.
ಕಾರ್ಯಕ್ರಮವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಾಲದಂಡಿ ಉದ್ಘಾಟನೆ ಮಾಡಲಿದ್ದಾರೆ. ದಲಿತ ಮಹಾಸಭಾದ ರಾಜ್ಯ ಉಪಾಧ್ಯಕ್ಷರಾದ ವೆಂಕಟರಮಣಸ್ವಾಮಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಡಾ.ಅಂಬೇಡ್ಕರ್ ಸ್ವಾಭಿಮಾನ ಜಾಗೃತಿ ಅಭಿಯಾನ ಸಮಿತಿಯ ರಾಜ್ಯಾಧ್ಯಕ್ಷರಾದ ಸಿ.ಎಂ.ಕೃಷ್ಣ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ. ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್ ವಿಶೇಷ ಗೌರವ ಅತಿಥಿಗಳಾಗಿ ಭಾಗಿಯಾಗಲಿದ್ದಾರೆ.
ದಾಸನೂರು ಕುಶಣ್ಣ ಅವರು ಕೂಡ ಈ ಕಾರ್ಯಕ್ರಮದಲ್ಲಿ ವಿಷಯ ಮಂಡನೆ ಮಾಡಲಿದ್ದಾರೆ. ಅಲ್ಲದೇ ಹಲವಾರ ಗಣ್ಯರು ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW