ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಫೆಬ್ರವರಿ 19ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಡಾ: ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ “ಛತ್ರಪತಿ ಶಿವಾಜಿ ಮಹಾರಾಜ್ ಜಯಂತಿ” ಕಾರ್ಯಕ್ರಮವನ್ನು ಆಚರಿಸಲಾಗುವುದು.
ಕಾರ್ಯಕ್ರಮವನ್ನು ಛತ್ರಪತಿ ಶಿವಾಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಲಾಗುತ್ತಿದ್ದು, ಜಿಲ್ಲೆಯ ವಿವಿಧ ಇಲಾಖೆಗಳ ಮುಖ್ಯಸ್ಥರು, ಸಿಬ್ಬಂದಿ, ಸಮುದಾಯದ ಮುಖಂಡರು, ಗಣ್ಯರು, ಕಲಾವಿದರು ಹಾಗೂ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು ಮಿರ್ಜಿ ಕೋರಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4