ಚಿಕ್ಕಮಗಳೂರು: ನಕ್ಸಲ್ ಚಳುವಳಿಯ ಕೊನೆಯ ವ್ಯಕ್ತಿ ಕೋಟೆಹೊಂಡ ರವೀಂದ್ರ ಇಂದು ಮುಖ್ಯವಾಹಿನಿಗೆ ಬರಲಿದ್ದು, ಇಂದು ಬೆಳಿಗ್ಗೆ 11 ಗಂಟೆ ವೇಳೆಗೆ ಎಸ್ಪಿ ಕಚೇರಿಯಲ್ಲಿ ಶರಣಾಗಲಿದ್ದಾರೆ ಎಂದು ತಿಳಿದು ಬಂದಿದೆ.
ಶೃಂಗೇರಿ ತಾಲ್ಲೂಕಿನ ಕಿಗ್ಗಾ ಗ್ರಾಮದ ಕೋಟೆಹೊಂಡ ರವೀಂದ್ರ ಕಾಡಿನಲ್ಲೇ ಉಳಿದಿದ್ದ ನಕ್ಸಲ್ ಚಳವಳಿಯ ಕೊನೆಯ ವ್ಯಕ್ತಿಯಾಗಿದ್ದರು.
ಜ.8ರಂದು ಲತಾ ಮುಂಡಗಾರು, ವನಜಾಕ್ಷಿ ಬಾಳೆಹೊಳೆ, ಸುಂದರಿ ಕುತ್ಲೂರು, ಮಾರೆಪ್ಪ ಅರೋಲಿ, ಕೆ.ವಸಂತ(ತಮಿಳುನಾಡು), ಟಿ.ಎನ್.ಜಿಷಾ(ಕೇರಳ) ಒಳಗೊಂಡ ತಂಡ ಶರಣಾಗಿತ್ತು. ಇದೀಗ ಇಂದು ರವೀಂದ್ರ ಶರಣಾಗಲಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4