ತುಮಕೂರು: ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ನವೆಂಬರ್ 8ರಂದು ಜಿಲ್ಲೆಯ 12 ಗ್ರಾಮ ಪಂಚಾಯತಿಗಳಲ್ಲಿ ಪಿಂಚಣಿ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.
ಈ ಅದಾಲತ್ ನಲ್ಲಿ ಪಿಂಚಣಿಗೆ ಸಂಬಂಧಿಸಿದಂತೆ ಫಲಾನುಭವಿಗಳ ಕುಂದು–ಕೊರತೆಗಳನ್ನು ಆಲಿಸಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು.
ನವೆಂಬರ್ 8ರಂದು ಜಿಲ್ಲೆಯ ಶಿರಾ ತಾಲೂಕಿನ ದೊಡ್ಡಅಗ್ರಹಾರ; ತುರುವೇಕೆರೆ ತಾಲ್ಲೂಕಿನ ಸಂಪಿಗೆ; ತಿಪಟೂರು ತಾಲೂಕಿನ ತಡಸೂರು; ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿ; ತುಮಕೂರು ತಾಲೂಕಿನ ಕೆಸರುಮಡು ಹಾಗೂ ಹಿರೇಹಳ್ಳಿ; ಕುಣಿಗಲ್ ತಾಲೂಕಿನ ಕಿತ್ನಾಮಂಗಲ ಹಾಗೂ ತಾವರೆಕೆರೆ; ಕೊರಟಗೆರೆ ತಾಲೂಕಿನ ಬುಕ್ಕಪಟ್ಟಣ; ಪಾವಗಡ ತಾಲ್ಲೂಕಿನ ತಿರುಮಣಿ; ಗುಬ್ಬಿ ತಾಲೂಕಿನ ಎಂ.ಎನ್.ಕೋಟೆ ಹಾಗೂ ಬೆಲವತ್ತ ಗ್ರಾಮ ಪಂಚಾಯಿತಿಗಳಲ್ಲಿ ಪಿಂಚಣಿ ಅದಾಲತ್ ನಡೆಯಲಿದ್ದು, ಪಿಂಚಣಿದಾರರು ಅದಾಲತ್ನಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಸಲ್ಲಿಸಿ ಪರಿಹರಿಸಿಕೊಳ್ಳಬಹುದು ಎಂದು ಅವರು ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q