ಬಹಳ ದಿನಗಳ ಹಿಂದೆಯೇ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ ಮಾಡಬೇಕಿತ್ತು. ಹಲವಾರು ಕಾರ್ಯಕ್ರಮಗಳು ಇದ್ದ ಕಾರಣ ಆಗಿರಲಿಲ್ಲ. ಇವತ್ತು ರಾಜ್ಯದ ಅಭಿವೃದ್ಧಿ ಉದ್ದೇಶದಿಂದ ಭೇಟಿಯಾಗಿದ್ದೇವೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ತೋಟದ ಮನೆಯಲ್ಲಿ ಮಾತನಾಡಿದ ಹೆಚ್. ಡಿ ಕುಮಾರಸ್ವಾಮಿ ಅವರು, ಮುಂದೆ ಎರಡು ಪಕ್ಷಗಳು ರಾಜ್ಯದ ಅಭಿವೃದ್ಧಿಗಾಗಿ ನರೇಂದ್ರ ಮೋದಿ ಅವರು ಗೆದ್ದು ಪ್ರಧಾನಿ ಆಗುವುದಕ್ಕೆ ಸಂಘಟನೆಯಲ್ಲಿ ಪಾಲ್ಗೊಳ್ಳಲು ಇಂದಿನ ಭೇಟಿಯ ಉದ್ದೇಶವಾಗಿದೆ ಎಂದರು.
ಧೃತಿಗೆಡಬೇಡಿ. ನಿಮ್ಮನ್ನು ಉಳಿಸಿ, ರಕ್ಷಣೆ ಮಾಡಿಕೊಳ್ಳುವ ಹೊಣೆ ನನ್ನದು ಎಂದು ದಾಸರಹಳ್ಳಿ ವಿಧಾನಸಭೆ ಕ್ಷೇತ್ರದ ಮುಖಂಡರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ಡಿ. ಕುಮಾರಸ್ವಾಮಿ ಅವರು ಧೈರ್ಯ ತುಂಬಿದರು.
ಭಾನುವಾರ ತಮ್ಮನ್ನು ಭೇಟಿಯಾದ ಕ್ಷೇತ್ರದ ಮುಖಂಡರು, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು; ಪಕ್ಷದ ನಿಷ್ಠಾವಂತರನ್ನು ಕಡೆಗಣಿಸುವ ಪ್ರಶ್ನೆ ಇಲ್ಲ ಎಂದರು.


