ಅಡುಗೆ ಮನೆ ಪದಾರ್ಥ ಮಂತ್ಯೆಯಲ್ಲಿ ಹಲವಾರು ಆರೋಗ್ಯ ಪ್ರಯೋಜನಗಳು:
ಆರೋಗ್ಯದಲ್ಲಿ ಸುಧಾರಣೆ ತರಲು ಅಡುಗೆ ಮನೆಯ ಪದಾರ್ಥಗಳು ಕೂಡ ಪ್ರಮುಖ ಪಾತ್ರ ವಹಿಸುತ್ತದೆ. ಅಂತಹ ಒಂದು ಪದಾರ್ಥಗಳಲ್ಲಿ ಮೆಂತ್ಯ ಸಹ ಒಂದು. ಮೆಂತ್ಯ ಸೇವನೆಯಿಂದ ಹಸಿವನ್ನು ನಿಯಂತ್ರಿಸುತ್ತದೆ, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ, ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ, ಉತ್ತಮ ಜೀರ್ಣಕ್ರಿಯೆಗೆ ಸಹಕಾರಿ, ಉರಿಯೂತ ನಿವಾರಕ ಗುಣಗಳು, ಪೋಷಕಾಂಶಗಳಿಂದ ಸಮೃದ್ಧವಾಗಿದೆ, ಎದೆ ಹಾಲಿನ ಪೂರೈಕೆಯನ್ನು ಹೆಚ್ಚಿಸುತ್ತದೆ, ಚರ್ಮದ ಆರೋಗ್ಯವನ್ನು ಸುಧಾರಿಸುತ್ತದೆ, ಕೂದಲಿನ ಬೆಳವಣಿಗೆಗೆ ಒಳ್ಳೆಯದು.
ಕುಂಬಳಕಾಯಿ ಬೀಜದಲ್ಲಿದೆ ಇಷ್ಟೆಲ್ಲಾ ಆರೋಗ್ಯ ಪ್ರಯೋಜನಗಳು:
ಕುಂಬಳಕಾಯಿ ಬೀಜ ಸೇವಿಸುವುದರಿಂದ ರಕ್ತದೊತ್ತಡ ಹಾಗೂ ಕೊಲೆಸ್ಟ್ರಾಲ್ ಮಟ್ಟ ಕಡಿಮೆಯಾಗುತ್ತದೆ. ಕುಂಬಳಕಾಯಿ ಬೀಜದಲ್ಲಿ ಮೆಗ್ನಿಶಿಯಂ ಹೆಚ್ಚಿರುವುದರಿಂದ ತಮ್ಮ ದೇಹದ ಮೂಳೆಗಳನ್ನು ಆರೋಗ್ಯಯುತವಾಗಿ ಕಾಪಾಡಿಕೊಳ್ಳಲು ನೆರವಾಗುತ್ತದೆ. ಇದರಲ್ಲಿ ಸತುವಿನಂತ ಗುಣ ಲಕ್ಷಣಗಳಿದ್ದು, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ. ಕುಂಬಳಕಾಯಿ ಬೀಜ ಸೇವನೆಯಿಂದ ಉತ್ತಮ ನಿದ್ರೆ ಮಾಡಲು ಸಹಕಾರಿಯಾಗಿದೆ. ಇದು ಜೀರ್ಣಕ್ರಿಯೆಗೂ ಉತ್ತಮವಾಗಿದೆ.