ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ನೆನೆಸಿಟ್ಟ ಬೆಂಡೆಕಾಯಿ ನೀರು ಕುಡಿಯಿರಿ:
ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ನೆನೆಸಿಟ್ಟ ಬೆಂಡೆಕಾಯಿ ನೀರನ್ನು ಕುಡಿಯುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು ಎಂದು ತಜ್ಞರು ಹೇಳುತ್ತಾರೆ. ಇದರಲ್ಲಿ ವಿಟಮಿನ್ ಬಿ, ಸಿ, ಫೋಲಿಕ್ ಆಮ್ಲ ಮತ್ತು ಫೈಬರ್ ಸಮೃದ್ಧವಾಗಿದೆ. ಇದು ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸುತ್ತದೆ. ಹೃದಯದ ಆರೋಗ್ಯಕ್ಕೆ ಒಳ್ಳೆಯದು. ಇದಲ್ಲದೆ ಕ್ಯಾನ್ಸರ್ ವಿರೋಧಿ ಗುಣಗಳನ್ನು ಹೊಂದಿದೆ. ಕಣ್ಣಿನ ಆರೋಗ್ಯವನ್ನು ಸುಧಾರಿಸುತ್ತದೆ. ಬೆಂಡೆಕಾಯಿ ತೂಕ ಇಳಿಸಲು ಮತ್ತು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಜೀರಿಗೆ ನೀರು ಕುಡಿದು ನೋಡಿ.. ಆರೋಗ್ಯಕ್ಕೆ ಬೆಸ್ಟ್:
ಪ್ರತಿದಿನ ಜೀರಿಗೆ ನೀರು ಕುಡಿದರೆ ಜೀರ್ಣಕ್ರಿಯೆಗೆ ತುಂಬಾ ಒಳ್ಳೆಯದು. ಅಲ್ಲದೆ ಗ್ಯಾಸ್ಟ್ರಿಕ್ ಸಮಸ್ಯೆ ತಡೆಗಟ್ಟಲು ಸಹಕಾರಿ. ಇದು ಅಜೀರ್ಣ, ಬೇಧಿ, ವಾಂತಿ ಈ ಬಗೆಯ ಸಮಸ್ಯೆ ತಡೆಗಟ್ಟಲು ಸಹಕಾರಿ. ನೀವು ಊಟವಾದ ಬಳಿಕ ಅಥವಾ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಜೀರಿಗೆ ನೀರು ಕುಡಿಯಿರಿ. ಇದರ ಜೊತೆಗೆ ಈ ಜೀರಿಗೆ ನೀರು ಕುಡಿಯುವುದರಿಂದ ಅನೇಕ ಬಗೆಯ ಕ್ಯಾನ್ಸರ್ ತಡೆಗಟ್ಟಲು ಸಹಕಾರಿ, ಅಲ್ಲದೆ ಕ್ಯಾನ್ಸರ್ ಕಣಗಳು ವೇಗವಾಗಿ ಹರಡುವುದನ್ನು ತಡೆಗಟ್ಟಲು ಸಹಕಾರಿ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296