ಬೇಸಿಗೆ ಕಾಲದಲ್ಲಿ ಈ ಆಹಾರಗಳನ್ನು ತಿನ್ನಬೇಡಿ:
ಬೇಸಿಗೆಯಲ್ಲಿ ಕರಿದ ಪದಾರ್ಥಗಳು, ಪಿಜ್ಜಾ, ಬರ್ಗರ್ ಗಳನ್ನು ಜೀರ್ಣಿಸಿಕೊಳ್ಳಲು ದೇಹವು ಶ್ರಮಪಡಬೇಕಾಗುತ್ತದೆ. ಬೇಸಿಗೆಯಲ್ಲಿ ಕರಿದ ಆಹಾರವನ್ನು ತ್ಯಜಿಸುವುದು ಉತ್ತಮ. ಈ ಆಹಾರಗಳು ಜೀರ್ಣಕ್ರಿಯೆಯ ಮೇಲೆ ಪರಿಣಾಮ ಬೀರುತ್ತವೆ. ಸಂಸ್ಕರಿಸಿದ ಆಹಾರದಲ್ಲಿ ಬಳಸುವ ಕೃತಕ ಸಿಹಿ ಮತ್ತು ರುಚಿಗಳು ದೇಹಕ್ಕೆ ಹಾನಿಕಾರಕವಾಗಿದೆ. ಶಾಖದ ಸಮಯದಲ್ಲಿ, ಮಾಂಸಾಹಾರವನ್ನು ಜೀರ್ಣಿಸಿಕೊಳ್ಳಲು ದೇಹವು ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ, ಇದರಿಂದಾಗಿ ದೇಹವು ಅಧಿಕ ಬಿಸಿಯಾಗುವುದರಿಂದ ನಿರ್ಜಲೀಕರಣಗೊಳ್ಳಬಹುದು.
ಖಾಲಿ ಹೊಟ್ಟೆಯಲ್ಲಿ ಪಪ್ಪಾಯ ಹಣ್ಣು ತಿಂದ್ರೆ ಏನೆಲ್ಲಾ ಲಾಭಗಳಿವೆ ಗೊತ್ತೇ?:
ಪಪ್ಪಾಯ ಹಣ್ಣನ್ನು ಸೇವಿಸುವುದರಿಂದ ಹಲವು ಆರೋಗ್ಯ ಪ್ರಯೋಜನಗಳು ಇವೆ. ವಿಶೇಷವಾಗಿ ಖಾಲಿ ಹೊಟ್ಟೆಯಲ್ಲಿ ತಿನ್ನುವಾಗ ಇದರ ಪ್ರಯೋಜನಗಳು ಹೆಚ್ಚು. ಹೌದು, ಹೊಳೆಯುವ ಚರ್ಮವನ್ನು ನೀಡುತ್ತದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ತೂಕವನ್ನು ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ. ನಿಮ್ಮ ಮೆದುಳನ್ನು ಚುರುಕುಗೊಳಿಸುತ್ತದೆ. ಕಣ್ಣಿನ ಆರೋಗ್ಯಕ್ಕೆ ಉತ್ತಮ. ಜೀರ್ಣಕ್ರಿಯೆಯನ್ನು ಹೆಚ್ಚಿಸುತ್ತದೆ. ಉರಿಯೂತವನ್ನು ಕಡಿಮೆ ಮಾಡುತ್ತದೆ. ಮಲಬದ್ಧತೆ ನಿವಾರ. ಹೃದಯದ ಆರೋಗ್ಯವನ್ನು ಉತ್ತೇಜಿಸುತ್ತದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296