ಬ್ಲಾಕ್ ಟೀ ಕುಡಿಯುವುದು ಒಳ್ಳೇದಾ ಕೆಟ್ಟದ್ದಾ?:
ಬೆಳಗ್ಗೆ ತಿಂಡಿ ತಿನ್ನುವ ಮುಂಚೆ ಟೀ ಅಥವಾ ಕಾಫಿ ಕುಡಿಯುವ ಅಭ್ಯಾಸ ಮಾಡಿಕೊಂಡಿರುತ್ತಾರೆ. ಇನ್ನು ಕೆಲವರಿಗೆ ಬ್ಲ್ಯಾಕ್ ಟೀ ತುಂಬಾ ಇಷ್ಟ ಆಗುತ್ತೆ.. ಇದು ಆರೋಗ್ಯಕ್ಕೂ ಒಳ್ಳೆಯದೂ ಎಂಬ ಮಾತು ಇದೆ. ಆದರೆ ಬೆಳಗಿನ ಸಮಯದಲ್ಲಿ ಬ್ಲ್ಯಾಕ್ ಟೀ ಕುಡಿಯುವುದು ಅಷ್ಟು ಒಳ್ಳೆಯದಲ್ಲ ಎಂದು ಹೇಳಲಾಗುತ್ತದೆ. ಏಕೆಂದರೆ ಇದು ಹಲವು ಕಾಯಿಲೆಗಳನ್ನು ತರುತ್ತದೆ ಎಂದು ಹೇಳಲಾಗುತ್ತದೆ. ತಜ್ಞರ ಲೆಕ್ಕಾಚಾರದಲ್ಲಿ ಬ್ಲ್ಯಾಕ್ ಟೀ ತುಂಬಾ ಆಮ್ಮಿಯ ಪ್ರಭಾವವನ್ನು ಹೊಂದಿದ್ದು, ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ದೂರ ಸರಿಯುವುದು ಉತ್ತಮ.
ಸೀತಾಫಲ ಹಣ್ಣಿಂದ ಇರೋ ಪ್ರಯೋಜನ ಒಂದೆರೆಡಲ್ಲ:
ಸೀತಾಫಲವು ಕಣ್ಣುಗಳಿಗೆ ತುಂಬಾ ಒಳ್ಳೆಯದು. ಇದರಲ್ಲಿರುವ ಲುಟೀನ್ ಶಕ್ತಿಯುತವಾದ ಉತ್ಕರ್ಷಣ ನಿರೋಧಕವಾಗಿದೆ. ಇದು ಕಣ್ಣುಗಳಲ್ಲಿ ಕಂಡುಬರುತ್ತದೆ. ಇದನ್ನು ತಿನ್ನುವುದರಿಂದ ನಿಮ್ಮ ಕಣ್ಣುಗಳನ್ನು ರಾಡಿಕಲ್ ಹಾನಿಯಿಂದ ರಕ್ಷಿಸುತ್ತದೆ.
ಸೀತಾಫಲ ತಿನ್ನುವುದರಿಂದ ದೇಹದಲ್ಲಿ ವಿಟಮಿನ್ ಸಿ ಕೊರತೆಯನ್ನು ಪೂರೈಸುತ್ತದೆ. ಜೊತೆಗೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಈ ಹಣ್ಣುಗಳು ಸ್ನಾಯು ನೋವನ್ನು ನಿವಾರಿಸುತ್ತದೆ. ಮೂಳೆಗಳನ್ನು ಗಟ್ಟಿಯಾಗಿಸಲು ಸಹಾಯ ಮಾಡುತ್ತದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


