ಇಂದು ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣದೊಂದಿಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಉತ್ತರ ಒಳನಾಡಿನ ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದ್ದು, ಉಳಿದೆಡೆ ಒಣಹವೆಯೇ ಮುಂದುವರಿಯಲಿದೆ.
ದಕ್ಷಿಣ ಒಳನಾಡಿನ ಮೈಸೂರು ಮತ್ತು ಮಂಡ್ಯದಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನೀಡಿದೆ. ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ, ಇದೆ.
ಚಳಿಗಾಲ ಆರಂಭವಾಗುತ್ತಿದ್ದು ರಾಜ್ಯಾದ್ಯಂತ ಚಳಿ ಜೋರಾಗುತ್ತಿದೆ. ವಿಜಯಪುರ ಹಾಗೂ ಬೀದರ್‌ನಲ್ಲಿ 14.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಇಂದಿನಿಂದ ಕೆಲವು ದಿನಗಳ ಕಾಲ ತಂಪು ಗಾಳಿ, ಆಗಾಗ ಮೋಡ ಕವಿದ ವಾತಾವರಣ ಉಂಟಾಗಲಿದೆ. ಉಳಿದಂತೆ ಇಲ್ಲಿ ಒಂದೆರಡು ಕಡೆ ಮಳೆಯಾಗುವ ಮುನ್ಸೂಚನೆ ಇದೆ.


