ತುಮಕೂರು: ಶಿರಾ–ಅಮರಪುರ ರಸ್ತೆ ಸಂಪೂರ್ಣ ಹಾಳಾಗಿದ್ದು, ರಸ್ತೆ ಗುಂಡಿ ಬಿದ್ದಿರುವ ಕಾರಣ ಹಲವಾರು ಅಪಘಾತಗಳು ಸಂಭವಿಸಿ, ಕೆಲವರು ಪ್ರಾಣ ಕಳೆದುಕೊಂಡಿದ್ದಾರೆ. ಇನ್ನು ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಕೈಕಾಲು ಫ್ಯಾಕ್ಚರ್ ಕೂಡ ಆಗಿದೆ. ಹಾಗಾಗಿ ಶಿರಾ ಅಮರಾಪುರ ಯಮ ಸ್ವರೂಪಿ ರಸ್ತೆ ಶೀಘ್ರ ದುರಸ್ತಿ ಮಾಡಬೇಕು ಎಂದು ಒತ್ತಾಯಿಸಿ ಶಿರಾ ತಾಲೂಕಿನ ತೊಗರ ಗುಂಟೆ ಗೇಟ್ ಬಳಿ ಗ್ರಾಮಸ್ಥರು ಬೃಹತ್ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಪಿ ಎಲ್ ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಟಿ.ಡಿ. ಮಲ್ಲೇಶ್, ಮೇಲ್ಕುಂಟೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಟಿ.ಡಿ. ನರಸಿಂಹಮೂರ್ತಿ, ಬಂದ ಕುಂಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ತಿಮ್ಮೇಗೌಡ, ಗ್ರಾಮ ಪಂಚಾಯತಿ ಸದಸ್ಯ ಚಂದ್ರಶೇಖರ, ಚಂದ್ರ ಕುಮಾರ, ಟಿ.ಡಿ.ಕೃಷ್ಣ, ರಾಜು, ರಮೇಶ್, ಅಶೋಕ್ ಚಿಕ್ಕಣ್ಣ , ಆಫ್ರೋಜ್ ಸೇರಿದಂತೆ ನೂರಾರು ಜನ ಪಾಲ್ಗೊಂಡಿದ್ದರು.
ಪ್ರತಿಭಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಲೋಕೋಪಯೋಗಿ ಎಇಇ ರಮೇಶ್, ಡಿ ವೈ ಎಸ್ ಪಿ ಶೇಖರ್, ಸಿಪಿಐ ಮಂಜೇಗೌಡ, ಅಭಿಯಂತರ ಗೋವಿಂದರಾಜು ಪ್ರತಿಭಟನಾಕಾರರೊಂದಿಗೆ ಸಂಧಾನ ನಡೆಸಿ ಇನ್ನು ಮೂರು ದಿನದಲ್ಲಿ ರಸ್ತೆ ಕಾಮಗಾರಿ ಪ್ರಾರಂಭಿಸುವ ಭರವಸೆ ನೀಡಿದ ಹಿನ್ನೆಲೆ ಪ್ರತಿಭಟನೆ ವಾಪಸ್ ಪಡೆಯಲಾಯಿತು.
ವರದಿ: ಇಸ್ಮಾಯಿಲ್ ಜಭಿ ವುಲ್ಲಾ ಖಾನ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4