ಕಾಂತಾರ ಚಿತ್ರ ಸೂಪರ್ ಹಿಟ್ ಆದ ಬೆನ್ನಲ್ಲೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ಕಾಂತಾರ ಅಧ್ಯಾಯ ೧ರ ಚಿತ್ರೀಕರಣ ಆರಂಭಿಸಿದ್ದಾರೆ. ಇದೀಗ ಈ ಸಿನಿಮಾದಿಂದ ಬಿಗ್ ಅಪ್ ಡೇಟ್ ಒಂದು ಹೊರಬಿದ್ದಿದ್ದು, ಈ ಚಿತ್ರದಲ್ಲಿ ತೆಲುಗು ಸೂಪರ್ ಸ್ಟಾರ್ ನಟ ಜೂ. ಎನ್ ಟಿಆರ್ ನಟಿಸಲಿದ್ದಾರೆ ಎನ್ನಲಾಗಿದೆ ಎನ್ನುವ ವಿಚಾರವೊಂದು ಹೊರ ಬಿದ್ದಿದೆ.
ಹೌದು..ಕಾಂತಾರ ಬಾಕ್ಸ್ ಆಫೀಸ್ ನಲ್ಲಿ ದೊಡ್ಡಮಟ್ಟದಲ್ಲಿ ಸದ್ದು ಮಾಡಿತ್ತು. ಕನ್ನಡಿಗನ ಸಿನಿಮಾಗೆ ಪ್ಯಾನ್ ಇಂಡಿಯಾ ಲೆವಲ್ ನಲ್ಲಿ ಭರ್ಜರಿ ಪ್ರತಿಕ್ರಿಯೆ ಸಿಕ್ಕಿತ್ತು. ಈ ಸಿನಿಮಾ ಬಿಡುಗಡೆಯಾದ ದಿನದಿಂದ ಚಿತ್ರಮಂದಿರಗಳು ತುಂಬಿ ತುಳುಕಿದ್ದವು. ಅಷ್ಟರ ಮಟ್ಟಿಗೆ ಕಾಂತಾರ ಪರಿಣಾಮ ಬೀರಿತ್ತು. ಚಿತ್ರ ಪ್ರೇಮಿಗಳಂತು ಈ ಚಿತ್ರದ ಬಗೆಗಿನ ಮತ್ತಷ್ಟು ವಿವರಗಳನ್ನು ಹುಡುಕೋದಕ್ಕೆ ಶುರು ಮಾಡಿದ್ರು.
ಸದ್ಯ ಕಾಂತಾರ ಅಧ್ಯಾಯ ೧ ತೆರೆಗೆ ಬರಲು ರೆಡಿಯಾಗುತ್ತಿದೆ. ಈಗಾಗಲೇ ಸಿನಿಮಾದ ಮುಹೂರ್ತ ನಡೆದಿದ್ದು, ಕಲಾವಿದರ ಆಯ್ಕೆಯೂ ಸಹ ಮುಗಿದಿದೆ. ಪಂಜುರ್ಲಿ ದೈವದ ಮೂಲದ ಕಥಾ ಆಧಾರಿತ ಸಿನಿಮಾ ಇದಾಗಿದ್ದು, ಕುತೂಹಲ ಮೂಡಿಸುತ್ತಿದೆ. ಕಳೆದ ಕೆಲವು ತಿಂಗಳ ಹಿಂದೆ ಬಿಡುಗಡೆಯಾದ ಚಿತ್ರದ ಪೋಸ್ಟರ್ ಸಖತ್ ಕ್ಯೂರಿಯಾಸಿಟಿ ಹುಟ್ಟಿಸಿತ್ತು. ಕೋಟ್ಯಾಂತರ ಅಭಿಮಾನಿಗಳು ಇದನ್ನು ವೀಕ್ಷಿಸಿದ್ದರು.
ಇನ್ನು ʼಕಾಂತಾರ ಅಧ್ಯಾಯ ೧ ರಲ್ಲಿ ಟಾಲಿವುಡ್ ಸೂಪರ್ ಸ್ಟಾರ್ ಜೂ. ಎನ್ ಟಿಆರ್ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಕುರಿತು ಟಾಲಿವುಡ್ ಮಂದಿ ಮಾತನಾಡಿಕೊಳ್ಳುತ್ತಿದ್ದಾರೆ. ಅಲ್ಲದೇ, ಕಳೆದ ಕೆಲವು ದಿನಗಳ ಹಿಂದೆ ರಿಷಬ್ ಎನ್ ಟಿಆರ್ ಭೇಟಿಯ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದು ಈ ವಿಚಾರಕ್ಕೆ ಬಲ ನೀಡಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


