ಟೊಮೇಟೋ ಬೆಲೆ 100 ರೂಪಾಯಿ ಗಡಿದಾಟಿದ್ದು, ಜನರು ಬೆಲೆ ಏರಿಕೆಯ ಶಾಕ್ ನಲ್ಲಿರುವಾಗಲೇ ಕೇಂದ್ರ ಸರ್ಕಾರದ ಉನ್ನತ ಅಧಿಕಾರಿಯೊಬ್ಬರು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಟೊಮೆಟೊ ಬೆಲೆ ಏರಿಕೆಯು ತಾತ್ಕಾಲಿಕ ವಿದ್ಯಮಾನ. ಶೀಘ್ರದಲ್ಲೇ ದರ ಇಳಿಕೆಯಾಗಲಿದೆ ಎಂದು ತಿಳಿಸಿದ್ದಾರೆ.
ಇದು ಹೆಚ್ಚು ಹಾಳಾಗುವ ವಸ್ತುವಾಗಿದೆ. ಹಠಾತ್ ಮಳೆ ಬೀಳುವ ಪ್ರದೇಶಗಳಲ್ಲಿ ಟೊಮೇಟೊ ಸಾಗಾಟದ ಮೇಲೆ ಪರಿಣಾಮ ಬೀರುತ್ತದೆ. ಇದು ತಾತ್ಕಾಲಿಕ ಸಮಸ್ಯೆ. ಶೀಘ್ರದಲ್ಲೇ ಟೊಮೆಟೊ ಬೆಲೆ ಇಳಿಕೆಯಾಗಲಿದೆ. ಈ ಸಮಯದಲ್ಲಿ ಪ್ರತಿ ವರ್ಷ ಟೊಮೆಟೊ ಬೆಲೆ ಏರಿಕೆಯಾಗುತ್ತದೆ ಎಂದು ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ಟೊಮ್ಯಾಟೋ ಬೆಲೆ ನೂರು ರೂಪಾಯಿ ಮುಟ್ಟಿದೆ. ಕಳೆದ ವಾರ 40-50 ರೂಪಾಯಿ ಆಸುಪಾಸಿನಲ್ಲಿದ್ದ ಟೊಮ್ಯಾಟೊ ಬೆಲೆ ಒಂದೇ ವಾರದಲ್ಲಿ ದುಪ್ಪಟ್ಟಾಗಿದೆ.
ದೇಶದ ನಾಲ್ಕು ಮಹಾನಗರಗಳಾದ, ದೆಹಲಿಯಲ್ಲಿ ಟೊಮೆಟೊ ಬೆಲೆ ಕೆಜಿಗೆ 60 ರೂ., ಮುಂಬೈ ಕೆಜಿಗೆ 42 ರೂ., ಕೋಲ್ಕತ್ತಾ ಕೆಜಿಗೆ 75 ರೂ. ಮತ್ತು ಚೆನ್ನೈನಲ್ಲಿ ಕೆಜಿಗೆ 67 ರೂ. ಇದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


