ಕೊರಟಗೆರೆ: ಪಟ್ಟಣದ ಹಿಂದೂ ಸಾದರ ಸಮುದಾಯ ಭವನದಲ್ಲಿ ಏರ್ಪಡಿಸಿರುವ ಕೊರಟಗೆರೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಲಾಗಿರುವ ಕನ್ನಡ ನುಡಿ ನಮನ,ಪತ್ರಿಕಾ ದಿನಾಚರಣೆ,ಪತ್ರಿಕೆ ವಿತರಕರಿಗೆ ಜರ್ಕಿನ್ ವಿತರಣೆ ಹಾಗೂ ಸಾಧಕ ಮಹಿಳೆಯರಿಗೆ ಸನ್ಮಾನ ಮಾಡುತ್ತಿರುವ ಕಾರ್ಯಕ್ರಮದಲ್ಲಿ ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ. ಪರಮೇಶ್ವರ್ ರವರು ಭಾಗವಹಿಸುತ್ತಿದ್ದಾರೆ..
ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಹಾಗೂ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಹಾಗೂ ದತ್ತಿ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ ಮಾಡಲಾಗುವುದು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕೊರಟಗೆರೆ ಇವರ ವತಿಯಿಂದ ಕೊರಟಗೆರೆಯ ಹಿಂದೂ ಸಾದರ ಸಮುದಾಯ ಭವನದಲ್ಲಿ ಆಯೋಜಿಸಲಾಗಿರುವ ಕನ್ನಡ ನುಡಿ ನಮನ ಹಾಗೂ ಪತ್ರಕರ್ತರ ದಿನಾಚರಣೆಯ ಸಮಾರಂಭಕ್ಕೆ ಜಿಲ್ಲೆಯ ಪತ್ರಕರ್ತರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರತಿವರ್ಷ 25 ಲಕ್ಷ ಹಣವನ್ನ ಜೀವನಪರ್ಯಂತ ಮುಡಿಪಾಗಿಟ್ಟ ಸಜ್ಜನಿಕೆಯ ರಾಜಕಾರಣಿ ಕರ್ನಾಟಕ ಸರ್ಕಾರದ ಗೃಹ ಮಂತ್ರಿಗಳಾದ ಡಾ ಜಿ ಪರಮೇಶ್ವರ್ ಅವರಿಗೆ ಕೃತಜ್ಞತಾ ಸಲ್ಲಿಕೆ ಹಾಗೂ ಮಹಿಳಾ ಸಾಧಕರಿಗೆ ಸನ್ಮಾನ ಪತ್ರಿಕ ರಂಗದಲ್ಲಿ ಜಿಲ್ಲಾ ಪ್ರಶಸ್ತಿ ಪಡೆದವರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ.
ಈ ಕಾರ್ಯಕ್ರಮಕ್ಕೆ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿ ವರ್ಗದವರು, ಗಣ್ಯರು ತಾಲೂಕು ಮಟ್ಟದ ಅಧಿಕಾರಿ ವರ್ಗದವರು ಸೇರಿದಂತೆ ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಳ್ಳಬೇಕೆಂದು ಕೊರಟಗೆರೆ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಅಧ್ಯಕ್ಷರಾದ ಕೆ ವಿ ಪುರುಷೋತ್ತಮ್ ತಿಳಿಸಿದರು.
ಈ ಸುಸಂದರ್ಭದಲ್ಲಿ ವಿಶೇಷವಾಗಿ ಮಹಿಳಾ ಕ್ಷೇತ್ರದಲ್ಲಿ ಸಾಧನೆಗೈದ ತುಮಕೂರು ವಿಶ್ವ ವಿದ್ಯಾನಿಲಯದ ಕುಲ ಸಚಿವರಾದ ನಾಹಿದ ಜಮ್ ಜಮ್ ರವರಿಗೆ ಸಂಘದ ವತಿಯಿಂದ ಸನ್ಮಾನಿಸಲಾಗುವುದು
ಈ ಸಮಾರಂಭದಲ್ಲಿ ತುಮಕೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಚೀನಿ ಪುರುಷೋತ್ತಮ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಘುರಾಮ್, ಜಿಲ್ಲಾಧಿಕಾರಿಗಳಾದ ಶ್ರೀನಿವಾಸ್, ಸಿಇಓ ಪ್ರಭು ಜಿ,ಜಿಲ್ಲಾ ವರಿಷ್ಠಾಧಿಕಾರಿಗಳಾದ ಅಶೋಕ್ ಕೆ ಭಾಗವಹಿಸಲಿದ್ದಾರೆ..
ವರದಿ: ಮಂಜುಸ್ವಾಮಿ ಎಂ ಎನ್ ಕೊರಟಗೆರೆ


