ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ದಿನಬಳಕೆಯ ಅಗತ್ಯ ತರಕಾರಿಯಾದ ಟೊಮೊಟೊ ಬೆಲೆ ರಾಜ್ಯ ರಾಜಧಾನಿಯಲ್ಲಿ 100 ರೂಪಾಯಿ ಗಡಿ ಮುಟ್ಟಿದ್ದು, ಬೇರೆ ನಗರಗಳಲ್ಲೂ ಸಹ 100 ರೂ.ಆಸುಪಾಸಿನಲ್ಲಿದೆ.
ರಾಜ್ಯದಲ್ಲಿ ಚಂಡಮಾರುತದಿಂದ ಅಕ್ಕಪಕ್ಕದ ರಾಜ್ಯಗಳಲ್ಲಿ ಟೊಮೆಟೊ ಬೆಳೆಗೆ ಭಾರಿ ಹಾನಿಯಾಗಿದ್ದು, ಬೆಲೆ ಗಗನಕ್ಕೇರಿದೆ. ಚಂಡಮಾರುತದ ಜತೆಗೆ ಬಿರುಗಾಳಿ ಸಹಿತ ಮಳೆಯಿಂದಾಗಿ ಬೆಳೆ ಹಾನಿಯಾಗಲು ಪ್ರಮುಖ ಕಾರಣವಾಗಿದೆ.
ಮಾರುಕಟ್ಟೆಗೆ ಟೊಮೆಟೊ ಅತಿ ಕಡಿಮೆ ಪ್ರಮಾಣದಲ್ಲಿ ಬರುತ್ತಿದ್ದು, ಇದರಿಂದಾಗಿ ಬೆಲೆ ಗಗನಕ್ಕೇರಿದೆ.ಟೊಮೆಟೊ ಬೆಲೆ ಏರಿಕೆಯಿಂದ ಸಾಮಾನ್ಯ ಜನರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB