ಶಿವಮೊಗ್ಗ: ಅಬ್ಬಿ ಫಾಲ್ಸ್ ನಲ್ಲಿ ಫೋಟೋ ತೆಗೆಸಿಕೊಳ್ಳಲು ಹೋಗಿ ಬೆಂಗಳೂರು ಮೂಲದ ಪ್ರವಾಸಿಗನೊಬ್ಬ ನೀರುಪಾಲಾಗಿರುವ ಘಟನೆ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ರಮೇಶ್ (35) ಮೃತಪಟ್ಟವರು ಎಂದು ತಿಳಿದು ಬಂದಿದೆ. ಇವರು ಬೆಂಗಳೂರಿನ ನಾಗರಬಾವಿಯ ಖಾಸಗಿ ಕಂಪನಿಯೊಂದರ ಮ್ಯಾನೇಜರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ತಮ್ಮ ಐವರು ಸ್ನೇಹಿತರೊಂದಿಗೆ ಅಬ್ಬಿ ಫಾಲ್ಸ್‌ನಲ್ಲಿ ಫೋಟೋಗೆ ಪೋಸ್ ನೀಡುವಾಗ ಫಾಲ್ಸ್‌ಗೆ ಇಳಿದಿದ್ದಾರೆ. ಈ ವೇಳೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ.
ಫಾಲ್ಸ್‌ನಲ್ಲಿ ರಮೇಶ್ ಕಣ್ಮರೆಯಾಗುವ 20 ಸೆಕೆಂಡ್‌ನ ವಿಡಿಯೋ ವೈರಲ್ ಆಗಿದೆ. ಘಟನೆಯ ಬಳಿಕ ರಮೇಶ್ ಮೃತದೇಹವು ಫಾಲ್ಸ್‌ನ ಕೆಳಭಾಗದಲ್ಲಿ ಪತ್ತೆಯಾಗಿದೆ.
ನಗರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


