ಜಲಪಾತ ವೀಕ್ಷಣೆಗೆ ತೆರಳಿದ್ದ ಪ್ರವಾಸಿಗರ ಮೇಲೆ ಜೇನು ಹುಳುಗಳು ದಾಳಿ ಮಾಡಿದ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದ ಸಾತೊಡ್ಡಿ ಜಲಪಾತದಲ್ಲಿ ಘಟನೆ ನಡೆದಿದೆ.
ಕಳೆದ ಎರಡು ದಿನಗಳಲ್ಲಿ 30ಕ್ಕೂ ಅಧಿಕ ಪ್ರವಾಸಿಗರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗಂಭೀರ ಗಾಯಗೊಂಡಿದ್ದ ನಾಲ್ವರು ಪ್ರವಾಸಿಗರಿಗೆ ಹುಬ್ಬಳ್ಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೇಸಿಗೆ ಹಿನ್ನೆಲೆಯಲ್ಲಿ ನೀರಲ್ಲಿ ಆಟವಾಡಲು ಸಾತೊಡ್ಡಿ ಫಾಲ್ಸ್ಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ.
ಜಲಪಾತದ ಬಳಿಯೇ ಪ್ರವಾಸಿಗರ ಮೇಲೆ ಜೇನುಹುಳಗಳ ದಾಳಿ ಮಾಡಿವೆ. ಸದ್ಯ ಜೇನುಹುಳುಗಳ ದಾಳಿ ಹಿನ್ನೆಲೆಯಲ್ಲಿ ಜಲಪಾತ ವೀಕ್ಷಣೆಗೆ ಅರಣ್ಯ ಇಲಾಖೆಗೆ ನಿರ್ಬಂಧ ಹೇರಿದೆ. ಬಿಸಗೋಡ ಕ್ರಾಸ್ನಲ್ಲಿ ಬ್ಯಾನರ್ ಅಳವಡಿಸಿ ಪ್ರವಾಸಿಗರಿಗೆ ಸೂಚನೆ ನೀಡಿದೆ. ಏ.14ರಿಂದ ಅನಿರ್ದಿಷ್ಟ ಕಾಲದವರೆಗೆ ಜಲಪಾತ ವೀಕ್ಷಣೆಯನ್ನು ನಿರ್ಬಂಧಿಸಲಾಗಿದೆ ಎಂದು ಬ್ಯಾನರ್ ಹಾಕಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296