ಕೊರಟಗೆರೆ : ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ತೋವಿನಕೆರೆ ಗ್ರಾಮ ಪಂಚಾಯಿತಿಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲಾಯಿತು. ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಟಿ.ಆರ್.ನಾಗರಾಜುರವರು18 ಮತಗಳನ್ನು ಪಡೆದು ನೂತನ ಅಧ್ಯಕ್ಷರಾಗಿ ಆಯ್ಕೆಯಾದರು. ಉಪಾಧ್ಯಕ್ಷೆ ಸ್ಥಾನಕ್ಕೆ ಸ್ಪರ್ಧಿಸಿದ್ದ ನರಸಮ್ಮರವರು 17 ಮತಗಳನ್ನು ಪಡೆದು ನೂತನ ಉಪಾಧ್ಯಕ್ಷೆಯಾಗಿ ಆಯ್ಕೆಯಾದರು.
ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷೆ ಸ್ಥಾನಕ್ಕೆ ಆಯ್ಕೆಯಾದ ಫಲಿತಾಂಶದ ವರದಿಯನ್ನು ಕೊರಟಗೆರೆಯ ತಾಲ್ಲೂಕು ದಂಡಾಧಿಕಾರಿ ನಾಹಿದಾ ಜಮ್ ಜಮ್ ಘೋಷಣೆ ಮಾಡಿದರು.
ಇನ್ನೂ ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷ ಟಿ.ಆರ್. ನಾಗರಾಜು ಮಾತನಾಡಿ, ಅಧ್ಯಕ್ಷನಾಗಲು ಸಹಕರಿಸಿದ ಎಲ್ಲಾ ಸದಸ್ಯರಿಗೂ ಧನ್ಯವಾದ ತಿಳಿಸಿ, ಗ್ರಾಮ ಅಭಿವೃದ್ಧಿಗೆ ಶ್ರಮಿಸುತ್ತ, ಗ್ರಾಮದ ಸ್ವಚ್ಛತೆ, ಗ್ರಾಮದ ಜನರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಶ್ರಮಿಸುತ್ತೇನೆ ಹಾಗೂ ಶಾಶ್ವತವಾದ ಕೆಲವು ಕಾರ್ಯಕ್ರಮಗಳನ್ನು ಮಾಡುವುದಾಗಿ ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ ನೂತನ ಅಧ್ಯಕ್ಷ, ಉಪಾಧ್ಯಕ್ಷೆಗೆ ಸ್ಥಳೀಯ ಜನಪ್ರತಿನಿಧಿಗಳು ಮತ್ತು ಮುಖಂಡರುಗಳು ಶುಭ ಕೋರಿದರು. ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ಹಂಚಿದರು.
ಈ ವೇಳೆ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರು ಉಪಾಧ್ಯಕ್ಷರು ಮತ್ತು ಸದಸ್ಯರುಗಳು, ಅಭಿವೃದ್ಧಿ ಅಧಿಕಾರಿ,ಸಿಬ್ಬಂದಿ ವರ್ಗ ಹಾಗೂ ಅನೇಕ ಗ್ರಾಮಸ್ಥರು ಸಾರ್ವಜನಿಕರು ಹಾಜರಿದ್ದರು.
ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy