ಕೆಮಿಕಲ್ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆಯಾಗಿ ಇಬ್ಬರು ಮೃಪಟ್ಟ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ಕೈಗಾರಿಕಾ ಪ್ರದೇಶದಲ್ಲಿ ಸಂಭವಿಸಿದೆ. ಮಧ್ಯಪ್ರದೇಶ ಮೂಲದ ಮೊಹಮ್ಮದ್ ಶಾಬಾದ್(21), ಇಂದ್ರಜೀತ್ (23) ಮೃತ ದುರ್ದೈವಿಗಳು.
ಉಳಿದಂತೆ ವಿಷಾನಿಲದಿಂದ ಎಂಟು ಜನರು ಅಸ್ವಸ್ಥರಾಗಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲರೂ ಪ್ರಣಾಪಾದಿಂದ ಪಾರಾಗಿದ್ದಾರೆ.
ರವಿವಾರ(ಜ.21) ರಾತ್ರಿ ಪ್ರಸನ್ನ ಪ್ರೀ ಪ್ರೊಸೆಸಿಂಗ್ ಲಿಮಿಟೆಡ್ ಎಂಬ ರಾಸಾಯನಿಕ ತಯಾರಿಕಾ ಕಾರ್ಖಾನೆಯಲ್ಲಿ ಘಟನೆ ನಡೆದಿದೆ. ಹುಮ್ನಾಬಾದ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


