ಬೆಳಗಾವಿ: ಚಲಿಸುತ್ತಿದ್ದ ಕಾರಿನ ಮೇಲೆ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಓರ್ವ ಸಾವನ್ನಪ್ಪಿ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಹೊರವಲಯದ ಸುವರ್ಣ ವಿಧಾನ ಸೌಧದ ಬಳಿ ನಡೆದಿದೆ.
ಬೆಳಗಾವಿಯಿಂದ ಹುಬ್ಬಳ್ಳಿಗೆ 3 ಜನರ ಪ್ರಯಾಣಿಕರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಇದೇ ಸಂದರ್ಭದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಏಕಾಏಕಿ ಕಬ್ಬು ತುಂಬಿದ ಟ್ರ್ಯಾಕ್ಟರ್ ಮಗುಚಿ ಬಿದ್ದಿದೆ.
ಕಾರಿನಲ್ಲಿದ್ದ ಹುಬ್ಬಳ್ಳಿ ಲಕ್ಷ್ಮೀ ನಗರ ನಿವಾಸಿ ಗಿರೀಶ್ ಕುಲಕರ್ಣಿ(24) ಸಾವನ್ನಪ್ಪಿದ್ದರೆ, ಪ್ರಥಮ್ ಎಂಬವರ ಸ್ಥಿತಿ ಗಂಭೀರವಾಗಿದೆ. ಇನ್ನೋರ್ವ ಪ್ರಯಾಣಿಕ ಗಿರೀಶ್ ಎಂಬವರಿಗೂ ಗಾಯಗಳಾಗಿವೆ.
ಟ್ರ್ಯಾಕ್ಟರ್ ನಲ್ಲಿ ಮಿತಿಗಿಂತ ಹೆಚ್ಚು ಕಬ್ಬು ಲೋಡ್ ಮಾಡಿರುವುದೇ ಅಪಘಾತಕ್ಕೆ ಕಾರಣವಾಗಿದೆ ಎಂದು ಹೇಳಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಹಿರಿಯ ಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q