ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಮೇ 20 ಮತ್ತು 21ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆ ಮಾಡಿಕೊಂಡಿದೆ.
ಮತ್ತೊಂದೆಡೆ ನಾಳೆ ಶನಿವಾರ ಮಧ್ಯಾಹ್ನವೇ 12:30ಕ್ಕೆ ಬೆಂಗಳೂರಿನಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ಏರ್ಪಡಿಸಿರುವುದರಿಂದ ಪರೀಕ್ಷಾರ್ಥಿಗಳಿಗೆ ಟ್ರಾಫಿಕ್ ಸಮಸ್ಯೆ ಭೀತಿ ಶುರುವಾಗಿದೆ.
ಮೇ 20ರ ಮೊದಲ ದಿನ ಗಣಿತ ಮತ್ತು ಜೀವಶಾಸ್ತ್ರದ ಪರೀಕ್ಷೆ ಇದ್ದು, ಬೆಳಗ್ಗೆ 10.30ಕ್ಕೆ ಸಿಟಿಇ ಪರೀಕ್ಷೆಗಳು ಆರಂಭವಾಗಲಿವೆ. ಇದೇ ದಿನ ಮಧ್ಯಾಹ್ನ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಸಮಾರಂಭಕ್ಕೆ ಬೆಳಗ್ಗೆಯಿಂದಲೇ ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಮೂಲೆ ಮೂಲೆಗಳಿಂದ ಪಕ್ಷದ ಕಾರ್ಯಕರ್ತರು, ಜನರು ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸುವ ಹಿನ್ನೆಲೆಯಲ್ಲಿ ತುಮಕೂರು ರಸ್ತೆ, ಮೈಸೂರು ರಸ್ತೆ, ಬಳ್ಳಾರಿ ರಸ್ತೆ ಸೇರಿದಂತೆ ನಗರದ ಬಹುತೇಕ ಎಲ್ಲ ಭಾಗಗಳ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗಿ ಸುಗಮ ಸಂಚಾರಕ್ಕೆ ಸಮಸ್ಯೆಯಾಗುವ ಸಾಧ್ಯತೆ ಇದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


