ಬೀದರ್: ಸರ್ಕಾರದಿಂದ ವಿತರಿಸಲಾದ 17 ಲಕ್ಷಕ್ಕೂ ಅಧಿಕ ಮೌಲ್ಯದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿ ಸಹಿತ ಇಬ್ಬರು ಆರೋಪಿಗಳನ್ನು ಬೀದರ್ ಜಿಲ್ಲೆಯ ಮಂಠಾಳ ಪೊಲೀಸ್ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಮಂಠಾಳಾ ಪೊಲೀಸ್ ಠಾಣೆಯ ಪಿ.ಎಸ್.ಐ. ರಾಜಕುಮಾರ ಹಾಗೂ ಆಹಾರ ನಿರೀಕ್ಷಕ ನಾಗರಾಜ ಪಾಟೀಲ್ ಇವರ ಸಮಕ್ಷಮದಲ್ಲಿ ದಾಳಿ ನಡೆಸಿ ಲಾರಿಯಲ್ಲಿದ್ದ 5,95,000 ರೂಪಾಯಿ 175 ಕ್ವಿಂಟಾಲ್ ಅಕ್ಕಿ, ಹಾಗೂ 12,00,000 ಮೌಲ್ಯದ ಲಾರಿ ಒಟ್ಟು 17,95,000 ಬೆಲೆಬಾಳುವ ವಸ್ತುಗಳನ್ನು ಜಪ್ತಿ ಮಾಡಿಕೊಂಡಿದ್ದು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಮಂಠಾಳ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಮನ್ನಳ್ಳಿ ಗ್ರಾಮದ ಹತ್ತಿರ ಎನ್.ಹೆಚ್-65 ಬಳಿಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಸೊತ್ತು ಸಹಿತ ಆರೋಪಿಗಳನ್ನು ಬಂಧಿಸಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


