ಬೆಂಗಳೂರು ಗ್ರಾಮಾಂತರ: ಹಾವು ಕಚ್ಚಿದ ಪರಿಣಾಮ 7 ವರ್ಷ ವಯಸ್ಸಿನ ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಕೋಳೂರು ಗ್ರಾಮದಲ್ಲಿ ನಡೆದಿದೆ.
ಟಿ.ಹೊಸಹಳ್ಳಿ ಗ್ರಾಮದ ಅನುಷಾ (7) ಮೃತಪಟ್ಟ ಮಗುವಾಗಿದೆ. ಮಗುವಿನ ತಂದೆ ತಾಯಿ ಕೋಳೂರು ಗ್ರಾಮದ ತೋಟದ ಮನೆಯಲ್ಲಿ ಈ ಕುಟುಂಬ ಕೂಲಿ ಕೆಲಸ ಮಾಡಿಕೊಂಡಿತ್ತು. ಇದೇ ತೋಟದಲ್ಲಿ ಆಟವಾಡುತ್ತಿದ್ದ ವೇಳೆ ಮಗುವಿಗೆ ಹಾವು ಕಚ್ಚಿದೆ.
ಮಗುವನ್ನು ತಕ್ಷಣವೇ ಕುಟುಂಬಸ್ಥರು ದೊಡ್ಡಬಳ್ಳಾಪುರ ಆಸ್ಪತ್ರೆಗೆ ಸಾಗಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಗುವಿನ ಸಾವಿನಿಂದ ಆಘಾತಗೊಂಡ ಪೋಷಕರ ರೋದನೆ ಮುಗಿಲುಮುಟ್ಟಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bu0PpuFHlmt705QwiTL3vv
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


