nammatumakuru

    Subscribe to Updates

    Get the latest creative news from FooBar about art, design and business.

    What's Hot

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026
    Facebook Twitter Instagram
    ಟ್ರೆಂಡಿಂಗ್
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ
    • ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ
    • ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ
    • ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಎಂಬ್ರಾಯಿಡರಿ, ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
    • ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ
    • ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿವಾಹಿತನ ಜೊತೆಗೆ ಪ್ರೀತಿಗೆ ಬಿದ್ದ 19 ವರ್ಷದ ಯುವತಿಯ ದುರಂತ ಅಂತ್ಯ!
    ಕೊರಟಗೆರೆ June 23, 2024

    ವಿವಾಹಿತನ ಜೊತೆಗೆ ಪ್ರೀತಿಗೆ ಬಿದ್ದ 19 ವರ್ಷದ ಯುವತಿಯ ದುರಂತ ಅಂತ್ಯ!

    By adminJune 23, 2024No Comments2 Mins Read
    ananya

    ವಿವಾಹಿತನನ್ನು ಪ್ರೀತಿಸಿದ ಯುವತಿ ಆತನೊಂದಿಗೆ ಮದುವೆ ಮಾಡಿಕೊಳ್ಳಲು ಬಯಸಿದ್ದು,  ಆದರೆ ಯುವತಿಯ ಪೋಷಕರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇಬ್ಬರೂ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ನಡೆದಿದೆ. ಸದ್ಯ ಯುವತಿಯ  ಮೃತದೇಹ ಪತ್ತೆಯಾಗಿದ್ದು, ವಿವಾಹಿತನಿಗಾಗಿ ಹುಡುಕಾಟ ನಡೆದಿದೆ.

    ಕೊರಟಗೆರೆ ತಾಲೂಕು ಕೋಳಾಲ ಹೋಬಳಿ ಮಾವತ್ತೂರು ಗ್ರಾ.ಪಂ. ಕೇಂದ್ರ ಸ್ಥಾನದಲ್ಲಿನ ಮಾವತ್ತೂರು ಕೆರೆಯ ಸಮೀಪ ಅಪರಿಚಿತ ಕಾರು, ಕಾರಿನಲ್ಲಿದ್ದ ಮೊಬೈಲ್ ಮತ್ತು ದಡದಲ್ಲಿದ್ದ ಇಬ್ಬರ ಚಪ್ಪಲಿಗಳು ಆಧರಿಸಿ ಕೋಳಾಲ ಪೊಲೀಸರ ತಂಡ ತನಿಖೆ ನಡೆಸಿದರು. ಆಗ, ಇಬ್ಬರೂ ತಮ್ಮ ಮನೆಯಿಂದ ಕಾಣೆಯಾಗಿ ವೈವಾಹಿಕ ಜೀವನದಲ್ಲಿ ಜಿಗುಪ್ಸೆಗೊಂಡು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವುದು ತಿಳಿದು ಬಂದಿದೆ.


    Provided by
    Provided by

    19 ವರ್ಷ ವಯಸ್ಸಿನ ಅನನ್ಯ ಹಾಗೂ 45 ವರ್ಷ ವಯಸ್ಸಿನ ರಂಗಶಾಮಯ್ಯ ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ.  ಬೈರಗೊಂಡ್ಲು ಗ್ರಾಮದ ಅಳಿಯ ಆಗಿರುವ ರಂಗಶಾಮಯ್ಯನಿಗೆ ಮಡದಿ ಗಂಗರತ್ನಮ್ಮ ಮತ್ತು ಇಬ್ಬರು ಗಂಡು ಮಕ್ಕಳಿದ್ದು, ಅವರು 11 ಮತ್ತು 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಈತ ಕೋಳಾಲದಲ್ಲಿ ಗ್ರಾಮ-1 ಕೇಂದ್ರ ತೆರೆದುಕೊಂಡು ಕೆಲಸ ಮಾಡುತ್ತಿದ್ದ. ಈ ಕೇಂದ್ರಕ್ಕೆ ಯುವತಿಯು ಜೆರಾಕ್ಸ್‌ಗಾಗಿ ಬರುತ್ತಿದ್ದಳು. ಆಗ, ರಂಗಶಾಮಯ್ಯನ ಪರಿಚಯವಾಗಿತ್ತು. ಈ ವೇಳೆ ತನಗೆ ಮದುವೆಯಾಗಿದ್ದರೂ ರಂಗಶಾಮಯ್ಯ ಯುವತಿಯನ್ನು ಪುಸಲಾಯಿಸಿ ಪ್ರೇಮದ ಬಲೆಗೆ ಬೀಳಿಸಿಕೊಂಡಿದ್ದಾನೆ.

    ಈ ವಿಚಾರ  ಇಬ್ಬರ  ಮನೆಯವರಿಗೆ ಗೊತ್ತಾಗಿದ್ದು,  ಮನೆಯವರು ಇವರಿಬ್ಬರ ಪ್ರೀತಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆ ಜೂ 8ರಂದು ಮಂಗಳವಾರ ಈ ಇಬ್ಬರೂ ಮನೆಯಿಂದ ಕಾಣೆಯಾಗಿದ್ದಾರೆ. ಶನಿವಾರ ಕೆರೆಯ ಬಳಿ ಇಬ್ಬರ ಚಪ್ಪಲಿ ಹಾಗೂ ಕಾರು ಪತ್ತೆಯಾಗಿತ್ತು. ಸದ್ಯ ಯುವತಿಯ ಮೃತದೇಹ ಪತ್ತೆಯಾಗಿದ್ದು, ರಂಗಶಾಮಯ್ಯನ ಮೃತದೇಹಕ್ಕಾಗಿ ಶೋಧ ನಡೆಯುತ್ತಿದೆ.

    ಮೃತ ಅನನ್ಯ ಕೋಳಾಲದ ಚೆನ್ನಮ್ಮ ಪ್ರಥಮ ದರ್ಜೆ ಕಾಲೇಜಿನಲ್ಲಿ ತೃತೀಯ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿದ್ದ ಮಗಳಿಗೆ ಉನ್ನತ ವ್ಯಾಸಂಗ ಮಾಡಿಸುವ ಬೆಟ್ಟದಷ್ಟು ಆಸೆಯಿಟ್ಟಿದ್ದ ತಂದೆ—ತಾಯಿ ಇದೀಗ ಮಗಳ ಸಾವಿನ ಸುದ್ದಿ ಕೇಳಿ ಕಂಗಾಲಾಗಿದ್ದಾರೆ. ಬಾಳಿ ಬದುಕಬೇಕಿದ್ದ ಯುವತಿ ಅನ್ಯಾಯವಾಗಿ ಸಾವನ್ನಪ್ಪಿದ್ದಾಳೆ.

    ಮಾವತ್ತೂರು ಕೆರೆಯ ಏರಿ ಸಮೀಪ ಕಾರು ನಿಂತಿದ್ದು, ಅದರಲ್ಲಿ ರಂಗಶಾಮಯ್ಯ ಮತ್ತು ಲಕ್ಕಯ್ಯನಪಾಳ್ಯದ ಅನನ್ಯದ ಮೊಬೈಲ್‌ ಗಳು ಸಿಕ್ಕಿವೆ. ಕೆರೆಯ ದಡದ ಕಲ್ಲಿನ ಮೇಲೆ ಇಬ್ಬರ ಚಪ್ಪಲಿಗಳು ಪೊಲೀಸರಿಗೆ ಸಿಕ್ಕಿವೆ.

    ಮಧುಗಿರಿ ಡಿವೈಎಸ್ಪಿ ರಾಮಚಂದ್ರ ನೇತೃತ್ವದಲ್ಲಿ ಕೊರಟಗೆರೆ ಸಿಪಿಐ ಅನಿಲ್, ಕೋಳಾಲ ಪಿಎಸ್ಟ್ ರೇಣುಕಾ, ಪಿಎಸೈ ಯೋಗೀಶ್ ಮತ್ತು ಆಗ್ನಿಶಾಮಕ ಠಾಣೆಯ 20ಕ್ಕೂ ಅಧಿಕ ಸಿಬ್ಬಂದಿಯ ತಂಡ ಸೇರಿ ಈಜು ಪಟುಗಳಿಂದ ಮಾವತ್ತೂರು ಕೆರೆಯಲ್ಲಿ ಶವಕ್ಕಾಗಿ ಹುಡುಕಾಟ ನಡೆಯಿತು. ಕೋಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    ಬೀದರ್: ಜಿಲ್ಲೆಯ ಔರಾದ ತಾಲೂಕಿನ ಸಂತಪುರ ಅನುಭವ ಮಂಟಪ ಗುರುಕುಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026

    ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

    February 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.