ಕೋಲ್ಕತ್ತಾ: ಆರ್ಜಿ ಕರ್ ವೈದ್ಯಕೀಯ ಕಾಲೇಜು, ಆಸ್ಪತ್ರೆಯಲ್ಲಿ ತರಬೇತಿ ನಿರತ ವೈದ್ಯೆಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಂಜಯ್ ಗೆ ಸೀಲ್ದಾ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.
ವೈದ್ಯೆ ಕುಟುಂಬಕ್ಕೆ 17 ಲಕ್ಷ ರೂ. ಪರಿಹಾರ ನೀಡುವಂತೆಯೂ ಸೀಲ್ದಾ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ ಕೋರ್ಟ್ ನ್ಯಾಯಾಧೀಶ ಅನಿರ್ಬನ್ ದಾಸ್ ಆದೇಶ ನೀಡಿದ್ದಾರೆ. ಆರೋಪಿ ಸಂಜಯ್ ಗೆ ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಕೋರ್ಟ್ ತೀರ್ಪು ನೀಡಿದೆ.
2024ರ ಆಗಸ್ಟ್ 9ರಂದು ಆಸ್ಪತ್ರೆಯ ಕಾನ್ಫರೆನ್ಸ್ ಕೊಠಡಿಯಲ್ಲಿ 31 ವರ್ಷದ ಟ್ರೈನಿ ವೈದ್ಯೆಯ ಶವ ಪತ್ತೆಯಾಗಿತ್ತು. ವೈದ್ಯರ ಮೇಲೆ ಮೊದಲು ಅತ್ಯಾಚಾರ ಎಸಗಿ ಬಳಿಕ ಕೊಲೆ ಮಾಡಿರುವುದು ಬೆಳಕಿಗೆ ಬಂದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 50 ಸಾಕ್ಷಿಗಳ ವಿಚಾರಣೆ ನಡೆದು ಜನವರಿ 9ರಂದು ವಿಚಾರಣೆ ಮುಕ್ತಾಯವಾಯಿತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx