ತುಮಕೂರು: ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮವು ಜಿಲ್ಲೆಯಲ್ಲಿರುವ ಮ್ಯಾನ್ಯುಯಲ್ ಸ್ಕಾವೆಂಜರ್ಸ್ ಹಾಗೂ ಅವರ ಅವಲಂಬಿತ ಯುವಕ/ಯುವತಿಯರಿಗೆ ವಿವಿಧ ತರಬೇತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
ನಿಗಮದಿಂದ ಅರ್ಹ ಫಲಾನುಭವಿಗಳಿಗೆ ಗ್ರಾಫಿಕ್ ಡಿಸೈನಿಂಗ್ ಮತ್ತು ವಿಡಿಯೋ ಎಡಿಟಿಂಗ್, ತಂತ್ರಾಂಶ (ಕೋರಲ್ ಡ್ರಾ, ನುಡಿ ತಂತ್ರಾಂಶ, ಕ್ಯಾನ್ವಾ, ಅಡೋಬ್ ಫೋಟೋಶಾಪ್, ಅಡೋಬ್ ಪ್ರೀಮಿಯರ್ ಪ್ರೊ, ಕಂಟೆಂಟ್ ಜನೆರೇಷನ್) ಪಠ್ಯೇತರ ಚಟುವಟಿಕೆ(ವ್ಯಕ್ತಿತ್ವ ಬೆಳವಣಿಗೆ, ಸಂವಹನ ಕೌಶಲ್ಯ, ಆರ್ಥಿಕ ಅಭಿವೃದ್ಧಿ) ಸೇರಿದಂತೆ ಮತ್ತಿತರ ತರಬೇತಿ ನೀಡಲಾಗುವುದು.
ಅರ್ಜಿದಾರರು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, 18 ರಿಂದ 35 ವರ್ಷ ವಯೋಮಾನದೊಳಗಿನವರಾಗಿರಬೇಕು ಹಾಗೂ ಮ್ಯಾನ್ಯುಯಲ್ ಸ್ಕಾವೆಂಜರ್ಸ್ ಗುರುತಿನ ಚೀಟಿ ಹೊಂದಿರಬೇಕು.
ಆಸಕ್ತರು ಭರ್ತಿ ಮಾಡಿದ ತಮ್ಮ ಅರ್ಜಿಯನ್ನು ನವೆಂಬರ್ 25ರೊಳಗಾಗಿ ನಗರದ ಕುಣಿಗಲ್ ರಸ್ತೆ ಸದಾಶಿವನಗರ ಶ್ರೀ ನಾಗಾರ್ಜುನ ಪತ್ತಿನ ಸಹಕಾರ ಸಂಘದ ಕಟ್ಟಡದಲ್ಲಿರುವ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q