nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ: ಅಹಮದ್ ಖಾನ್ ಸೆರ್

    July 31, 2026

    ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ

    July 31, 2026

    ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ

    July 31, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ: ಅಹಮದ್ ಖಾನ್ ಸೆರ್
    • ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ
    • ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ
    • ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ
    • ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ
    • ಹೇಮಾವತಿ ನೀರಿಗಾಗಿ ಅನಿರ್ದಿಷ್ಟಾವಧಿ ಸತ್ಯಾಗ್ರಹ : ಅಹೋರಾತ್ರಿ ಧರಣಿ ಆರಂಭ!
    • ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಮಾರಕ: ಉಚಿತ ಕಾನೂನು ಸೇವೆಗಳ ಸದುಪಯೋಗಕ್ಕೆ ನ್ಯಾಯಾಧೀಶೆ ಸುಷ್ಮಾ ಎಂ. ಕರೆ
    • ಔರಾದ್: ಕಲುಷಿತ ನೀರು ಸರಬರಾಜಾಗದಂತೆ ಮುಂಜಾಗ್ರತೆ ವಹಿಸಿ: ಇಒ ಕಿರಣ ಪಾಟೀಲ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೂತ್ ಮಟ್ಟದ ಅಧಿಕಾರಿಗಳಿಗೆ ತರಬೇತಿ ಆಯೋಜನೆ
    ತುಮಕೂರು March 29, 2025

    ಬೂತ್ ಮಟ್ಟದ ಅಧಿಕಾರಿಗಳಿಗೆ ತರಬೇತಿ ಆಯೋಜನೆ

    By adminMarch 29, 2025No Comments2 Mins Read
    election

    ತುಮಕೂರು: ಬುಧವಾರ ನವದೆಹಲಿಯ ಇಂಡಿಯಾ ಇಂಟರ್ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಡೆಮಾಕ್ರಸಿ & ಎಲೆಕ್ಷನ್ ಮ್ಯಾನೇಜ್ಮೆಂಟ್ (IIIDEM)ನಲ್ಲಿ ಚುನಾವಣಾ ಆಯೋಗದ ಚುನಾವಣಾ ಆಯುಕ್ತ ಡಾ. ವಿವೇಕ್ ಜೋಶಿ ಅವರೊಂದಿಗೆ ಹಮ್ಮಿಕೊಂಡಿದ್ದ ಮತಗಟ್ಟೆ ಮಟ್ಟದ ಅಧಿಕಾರಿ(BLO)ಗಳ ಮೊದಲ ತರಬೇತಿಯನ್ನು ಭಾರತೀಯ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಉದ್ಘಾಟಿಸಿದರು.

    ತರಬೇತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮುಂದಿನ ಕೆಲವು ವರ್ಷಗಳಲ್ಲಿ 1 ಲಕ್ಷಕ್ಕೂ ಹೆಚ್ಚು ಬಿಎಲ್ಒಗಳಿಗೆ ಇಂತಹ ತರಬೇತಿಯನ್ನು ನೀಡಲು ಉದ್ದೇಶಿಸಲಾಗಿದೆ. ಈ ತರಬೇತಿ ಪಡೆದ ಬಿಎಲ್ಒಗಳು ದೇಶಾದ್ಯಂತ ವಿಧಾನಸಭಾ ಕ್ಷೇತ್ರ ಮಟ್ಟದ ಮಾಸ್ಟರ್ ತರಬೇತುದಾರರ (ALMTಗಳು) ಒಂದು ಗುಂಪನ್ನು ರಚಿಸುತ್ತಾರೆ. ಇವರು 100 ಕೋಟಿ ಮತದಾರರು ಹಾಗೂ ಆಯೋಗದ ನಡುವಿನ ಮೊದಲ ಮತ್ತು ಪ್ರಮುಖ ಸಂಪರ್ಕ ಸಾಧನವಾಗಿ ಕಾರ್ಯನಿರ್ವಹಿಸಲಿದ್ದಾರೆ.

    ಈ ವಿಶಿಷ್ಟ ಸಾಮರ್ಥ್ಯ ನಿರ್ಮಾಣ ಕಾರ್ಯಕ್ರಮವು ಹಂತ ಹಂತವಾಗಿ ಮುಂದುವರಿಯಲಿದ್ದು, ಈ ತರಬೇತಿ ಕಾರ್ಯಕ್ರಮದಲ್ಲಿ ಬಿಹಾರ, ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ಪುದುಚೇರಿ ಮತ್ತು ತಮಿಳುನಾಡಿನ 109 ಬಿಎಲ್ ಓ, 24 ಚುನಾವಣಾ ನೋಂದಣಿ ಅಧಿಕಾರಿ(ಇಆರ್ ಓ)ಗಳು ಹಾಗೂ 13 ಜಿಲ್ಲಾ ಚುನಾವಣಾಧಿಕಾರಿ(ಡಿಇಒ)ಗಳು ಭಾಗವಹಿಸಿ ಪ್ರಯೋಜನ ಪಡೆಯಲಿದ್ದಾರೆ.

    ಬಿಎಲ್ಒಗಳು ರಾಜ್ಯ ಸರ್ಕಾರಿ ಅಧಿಕಾರಿಗಳಾಗಿದ್ದು, ಇವರಿಗೆ ಚುನಾವಣಾ ಪ್ರಕ್ರಿಯೆಯಲ್ಲಿ ವಹಿಸಬೇಕಾದ ಪಾತ್ರ ಹಾಗೂ ಜವಾಬ್ದಾರಿಗಳ ಬಗ್ಗೆ ತರಬೇತಿಯನ್ನು ಆಯೋಜಿಸಲಾಗಿದೆ. ಜಿಲ್ಲಾ ಚುನಾವಣಾ ಅಧಿಕಾರಿ(ಡಿಇಒ)ಗಳ ಅನುಮೋದನೆಯ ನಂತರ ಚುನಾವಣಾ ನೋಂದಣಿ ಅಧಿಕಾರಿ(ಇಆರ್ಓ)ಗಳು ಬಿಎಲ್ ಒಗಳನ್ನು ನೇಮಕ ಮಾಡುತ್ತಾರೆ. ಮತದಾರರ ಪಟ್ಟಿಯ ದೋಷ–ಮುಕ್ತ ನವೀಕರಣದಲ್ಲಿ ಇಆರ್ ಒ ಮತ್ತು ಬಿಎಲ್ಒಗಳ ನಿರ್ಣಾಯಕ ಪಾತ್ರವನ್ನು ಒಪ್ಪಿಕೊಂಡ ಜ್ಞಾನೇಶ್ ಕುಮಾರ್ ಅವರು ರಾಜ್ಯ ಸರ್ಕಾರಗಳು ಎಸ್ಡಿಎಂ ಮಟ್ಟದ ಅಥವಾ ಸಮಾನ ಅಧಿಕಾರಿಗಳನ್ನು ಇಆರ್ ಒಗಳನ್ನಾಗಿ ನಾಮನಿರ್ದೇಶನ ಮಾಡಬೇಕು. ಜೇಷ್ಠತೆಯನ್ನು ಪರಿಗಣಿಸಿ ಬಿಎಲ್ಒಗಳನ್ನು ನೇಮಿಸಬೇಕು ಎಂದು ತಿಳಿಸಿದರು.
    ಸಂವಿಧಾನದ 326ನೇ ವಿಧಿ ಮತ್ತು ಆರ್ಪಿ ಕಾಯ್ದೆ 1950ರ ಸೆಕ್ಷನ್ 20ರ ಪ್ರಕಾರ, 18 ವರ್ಷಕ್ಕಿಂತ ಮೇಲ್ಪಟ್ಟ ಮತ್ತು ಕ್ಷೇತ್ರದಲ್ಲಿ ಸಾಮಾನ್ಯವಾಗಿ ವಾಸಿಸುವ ಭಾರತದ ನಾಗರಿಕರನ್ನು ಮಾತ್ರ ಮತದಾರರಾಗಿ ನೋಂದಾಯಿಸಿಕೊಳ್ಳಬಹುದು ಎಂದು ಅವರು ಹೇಳಿದರು.

    ಎಲ್ಲಾ ಸಿಇಒಗಳು, ಡಿಇಒಗಳು, ಇಆರ್ ಒಗಳು ತಮ್ಮ ಮಟ್ಟದಲ್ಲಿ ಸರ್ವಪಕ್ಷ ಸಭೆಗಳನ್ನು ನಡೆಸಬೇಕು. ಮತದಾರರ ಪಟ್ಟಿಯ ಸರಿಯಾದ ನವೀಕರಣ ಸೇರಿದಂತೆ ಅವರ ಅಧಿಕಾರ ವ್ಯಾಪ್ತಿಗೆ ಸಂಬAಧಿಸಿದ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಅವರು ನಿರ್ದೇಶಿಸಿದರು.

    ಇಆರ್ಒ ಅಥವಾ ಬಿಎಲ್ ಒ ವಿರುದ್ಧ ಯಾವುದೇ ದೂರುಗಳು ಬಂದಲ್ಲಿ ಗಂಭೀರವಾಗಿ ಪರಿಗಣಿಸಿ ಸಂಬAಧಿಸಿದವರ ಮೇಲೆ ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು.

    ಮತದಾರರ ಪಟ್ಟಿಯ ನವೀಕರಣಕ್ಕಾಗಿ ಮನೆ-ಮನೆ ಪರಿಶೀಲನೆಯ ಸಮಯದಲ್ಲಿ ಎಲ್ಲಾ ಬಿಎಲ್ಒಗಳು ಮತದಾರರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದು ಅವರು ಹೇಳಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ

    July 31, 2026

    ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ

    July 31, 2026

    ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ

    July 30, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ: ಅಹಮದ್ ಖಾನ್ ಸೆರ್

    July 31, 2026

    ಸರಗೂರು: “ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಸಮಾಜದ ಎಲ್ಲ ವರ್ಗದ ಜನರಿಗೆ ನ್ಯಾಯ, ಸಮಾನತೆ ಹಾಗೂ ಗೌರವಯುತ…

    ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ

    July 31, 2026

    ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ

    July 31, 2026

    ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ

    July 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.